AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 4.5 ಲಕ್ಷ ಶಿಕ್ಷಕರಿಗೆ ‘TR’ ಗೌರವ: ಇನ್ಮುಂದೆ ಹೆಸರಿನ ಮೊದಲು ‘ಟೀಚರ್’ ಬಿರುದು

ಕರ್ನಾಟಕದ 4.5 ಲಕ್ಷ ಶಿಕ್ಷಕರಿಗೆ ‘TR’ ಗೌರವ: ಇನ್ಮುಂದೆ ಹೆಸರಿನ ಮೊದಲು ‘ಟೀಚರ್’ ಬಿರುದು

ಹರೀಶ್ ಜಿ.ಆರ್​.
| Edited By: |

Updated on:Sep 06, 2026 | 6:53 AM

Share

ಕರ್ನಾಟಕ ಸರ್ಕಾರವು 4.5 ಲಕ್ಷ ಶಿಕ್ಷಕರಿಗೆ ಟಿಆರ್ ಗೌರವ ಬಿರುದನ್ನು ಅನುಮೋದಿಸಿದೆ. ವೈದ್ಯರಿಗೆ ಡಿಆರ್ ಇರುವಂತೆಯೇ, ಶಿಕ್ಷಕರ ಹೆಸರಿನ ಮುಂದೆ ಟಿಆರ್ ಎಂದು ಸೇರಿಸಲಾಗುವುದು. ಶಿಕ್ಷಕರ ದಿನಾಚರಣೆಯಂದು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಸೂಕ್ತ ಗೌರವ ಮತ್ತು ಸ್ಥಾನಮಾನ ನೀಡುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 06: ಕರ್ನಾಟಕ ಸರ್ಕಾರವು ರಾಜ್ಯದ ಸುಮಾರು 4.5 ಲಕ್ಷ ಶಿಕ್ಷಕರಿಗೆ ಟಿಆರ್ ಎಂಬ ಗೌರವ ಬಿರುದನ್ನು ನೀಡಲು ಆದೇಶ ಹೊರಡಿಸಿದೆ. ಇದು ವೈದ್ಯರಿಗೆ ಡಿಆರ್ (ಡಾಕ್ಟರ್) ಎಂಬ ಬಿರುದು ಇರುವಂತೆಯೇ, ಇನ್ನು ಮುಂದೆ ಶಿಕ್ಷಕರ ಹೆಸರಿನ ಮುಂದೆ ಟಿಆರ್ (ಟೀಚರ್) ಎಂದು ಸೇರಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ. ಕರ್ನಾಟಕದ ಸುಮಾರು 4.5 ಲಕ್ಷ ಶಿಕ್ಷಕರಿಗೆ ಈ ಗೌರವ ಸಿಗಲಿದ್ದು, ಈ ಮಹತ್ವದ ನಿರ್ಧಾರವನ್ನು ಪ್ರಕಟಿಸುವ ಮೂಲಕ ಶಿಕ್ಷಕ ಸಮುದಾಯಕ್ಕೆ ಶುಭ ಸುದ್ದಿ ನೀಡಿದೆ. ಶಿಕ್ಷಕರ ಹೆಸರಿನ ಮುಂದೆ ಟಿಆರ್ ಎಂದು ಸೇರಿಸುವ ಮೂಲಕ ಅವರಿಗೆ ಸಮಾಜದಲ್ಲಿ ಮತ್ತಷ್ಟು ಗೌರವ ಮತ್ತು ಗುರುತಿಸುವಿಕೆ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿರೋದಾಗಿ ತಿಳಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 06, 2026 06:53 AM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More