ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ

Edited By:

Updated on: Mar 04, 2026 | 3:41 PM

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ದೊಡ್ಡ ಗಲಾಟೆ ಸೃಷ್ಟಿಸಿದ್ದಾರೆ. ಪತಿ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ ಶಾಲೆಗೇ ಬಂದು ಹೈಡ್ರಾಮಾ ನಡೆಸಿದ್ದು, ಈ ಘಟನೆ ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ.

ಕೊಪ್ಪಳ, ಮಾರ್ಚ್​​ 04: ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 04, 2026 03:40 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More