IND vs SA 2nd Test: ಅಭ್ಯಾಸಕ್ಕೆ ಮರಳಿದ ಟೀಮ್ ಇಂಡಿಯಾ ಪ್ಲೇಯರ್ಸ್: ಕೇಪ್ ಟೌನ್ನಲ್ಲಿ ಕಠಿಣ ಪ್ರ್ಯಾಕ್ಟೀಸ್
Team India Practice: ಟೀಮ್ ಇಂಡಿಯಾ ಆಟಗಾರರು ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಪ್ರ್ಯಾಕ್ಟೀಸ್ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಇದರಲ್ಲಿ ಭಾರತೀಯ ಬ್ಯಾಟರ್ಗಳು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಮೊದಲ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿತು. ಸೆಂಚುರಿಯನ್ನಲ್ಲಿ ಹೀನಾಯ ಸೋಲು ಕಂಡ ಟೀಮ್ ಇಂಡಿಯಾ ಇದೀಗ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ರೋಹಿತ್ ಪಡೆ ವಿಶ್ರಾಂತಿಯ ಬಳಿಕ ಇದೀಗ ಅಭ್ಯಾಸಕ್ಕೆ ಮರಳಿದೆ. ಟೀಮ್ ಇಂಡಿಯಾ ಆಟಗಾರರು ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಪ್ರ್ಯಾಕ್ಟೀಸ್ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಇದರಲ್ಲಿ ಭಾರತೀಯ ಬ್ಯಾಟರ್ಗಳು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಅಲ್ಲದೆ ರವೀಂದ್ರ ಜಡೇಜಾ ನೆಟ್ಸ್ನಲ್ಲಿ ಬೆವರು ಹರಿಸುತ್ತಿದ್ದು, ಇವರು ದ್ವಿತೀಯ ಟೆಸ್ಟ್ನಲ್ಲಿ ಕಾಣಿಸಿಕೊಳ್ಳುವ ಸಂಭವವಿದೆ. ಹಾಗೆಯೆ ಹೊಸದಾಗಿ ತಂಡ ಸೇರಿಕೊಂಡ ಆವೇಶ್ ಖಾನ್ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಆಡುವ ಸಾಧ್ಯತೆ ಇದೆ. ಜನವರಿ 3 ರಿಂದ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ