Loading video

IND vs ENG: ಅಂತಿಮ ಪಂದ್ಯಕ್ಕಾಗಿ ಅಹಮದಾಬಾದ್​ಗೆ ಆಗಮಿಸಿದ ಟೀಮ್ ಇಂಡಿಯಾ

|

Updated on: Feb 11, 2025 | 7:18 AM

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯದಲ್ಲಿ 4 ವಿಕೆಟ್​ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲೂ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಕೊನೆಯ ಮ್ಯಾಚ್ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಕ್ಕಾಗಿ ಸೋಮವಾರ ಟೀಮ್ ಇಂಡಿಯಾ ಅಹಮದಾಬಾದ್​ಗೆ ಆಗಮಿಸಿದೆ. ಇದಕ್ಕೂ ಮುನ್ನ ಕಟಕ್​ನಲ್ಲಿ ನಡೆದ 2ನೇ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 4 ವಿಕೆಟ್​ಗಳ ಜಯ ಸಾಧಿಸಿತ್ತು.

ಈ ಗೆಲುವಿನ ಬಳಿಕ ಅಹಮದಾಬಾದ್​ಗೆ ಆಗಮಿಸಿರುವ ಭಾರತೀಯ ಆಟಗಾರರು ಇದೀಗ 3ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಫೆಬ್ರವರಿ 12 ರಂದು ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಬಹುದು.

ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಗೆದ್ದಿರುವ ಭಾರತ ತಂಡವು ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಇದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲೂ ಇಂಗ್ಲೆಂಡ್​ ತಂಡವನ್ನು ಬಗ್ಗು ಬಡಿಯುವ ಇರಾದೆಯಲ್ಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.