IND vs NZ, ICC World Cup: ನ್ಯೂಝಿಲೆಂಡ್ ವಿರುದ್ಧ ಸೆಮಿಫೈನಲ್: ಮುಂಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು
Team India reached Mumbai: ಬುಧವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್ಗಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ 2023ರ ಲೀಗ್ ಪಂದ್ಯವನ್ನು ಒಂದೇ ಒಂದು ಸೋಲಿಲ್ಲದೆ ಅದ್ಭುತವಾಗಿ ಮುಗಿಸಿರುವ ಭಾರತ ಕ್ರಿಕೆಟ್ ತಂಡ ಇದೀಗ ಸೆಮಿಫೈನಲ್ಗೆ ಸಜ್ಜಾಗುತ್ತಿದೆ. ಬುಧವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ. ಈ ಮ್ಯಾಚ್ಗಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಉಳಿದ ಎಲ್ಲ ಆಟಗಾರರು ಜೊತೆಯಾಗಿ ಬೆಂಗಳೂರಿನಿಂದ ಸೋಮವಾರ ಸಂಜೆ ವೇಳೆಗೆ ಮುಂಬೈ ತಲುಪಿದರು. ಕೊಹ್ಲಿ ಇವರಿಗಿಂತ ಮುಂಚಿತವಾಗಿ ಒಬ್ಬರೇ ಮುಂಬೈಗೆ ಪ್ರಯಾಣಿಸಿದ್ದರು. ಇಂದು ಎಲ್ಲ ಆಟಗಾರರು ತರಭೇತಿಯಲ್ಲಿ ಪಾಲ್ಗೊಳ್ಳಲಿದ್ದು, ಮಹತ್ವದ ಪಂದ್ಯಕ್ಕೆ ಗೇಮ್ ಪ್ಲಾನ್ ರೂಪಿಸಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ