IND vs NZ, World Cup Semi Final: ವಾಂಖೆಡೆ ಸ್ಟೇಡಿಯಂಗೆ ತಲುಪಿದ ಟೀಮ್ ಇಂಡಿಯಾ ಆಟಗಾರರು: ವಿಡಿಯೋ

IND vs NZ, World Cup Semi Final: ವಾಂಖೆಡೆ ಸ್ಟೇಡಿಯಂಗೆ ತಲುಪಿದ ಟೀಮ್ ಇಂಡಿಯಾ ಆಟಗಾರರು: ವಿಡಿಯೋ

Vinay Bhat
|

Updated on:Nov 15, 2023 | 12:35 PM

Team India Arrived Wankhede: 2023ರ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸ್ಪರ್ಧಿಸುತ್ತಿವೆ. ಮುಂಬೈನ ಪ್ರಸಿದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದು ಈಗಾಗಲೇ ಭಾರತೀಯ ಆಟಗಾರರು ಬಸ್ ಮೂಲಕ ವಾಂಖೆಡೆ ತಲುಪಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023 ರ ಗುಂಪು ಹಂತದ 9 ಪಂದ್ಯಗಳಲ್ಲಿ ಒಂಬತ್ತನ್ನೂ ಗೆದ್ದು ಬೀಗಿದ ಭಾರತ ಕ್ರಿಕೆಟ್ ತಂಡ ಇದೀಗ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ (India vs New Zealand) ತಂಡವನ್ನು ಎದುರಿಸಲು ಸಜ್ಜಾಗಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಭಾರತೀಯ ಆಟಗಾರರು ಬಸ್ ಮೂಲಕ ವಾಂಖೆಡೆ ತಲುಪಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದು ಕೂಡ ಹೇಳಬಹುದು. ಯಾಕೆಂದರೆ, ಕಿವೀಸ್ ವಿರುದ್ಧ 2019 ರ ವಿಶ್ವಕಪ್ ಸೆಮಿ-ಫೈನಲ್​ನಲ್ಲಿ ಭಾರತ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಈಗ ಮತ್ತೊಮ್ಮೆ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಸೆಣೆಸಾಟ ನಡೆಸಲು ಸಜ್ಜಾಗುತ್ತಿದೆ. ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಬಲಿಷ್ಠ ತಂಡವಾಗಿರುವ ಭಾರತ ಇಂದು ಹೇಗೆ ಪ್ರದರ್ಶನ ನೀಡುತ್ತೆ ನೋಡಬೇಕು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 15, 2023 12:34 PM