ಚಾಂಪಿಯನ್ ಪಟ್ಟಕ್ಕೇರುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರ್ತಿಯರ ಸಂಭ್ರಮ ಹೇಗಿತ್ತು ನೋಡಿ
Womens ODI World Cup 2025: ಈ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಯಿತು. ಇತ್ತ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್, ಸೌತ್ ಆಫ್ರಿಕಾ ತಂಡದ ಕೊನೆಯ ಬ್ಯಾಟರ್ ನಾಡಿನ್ ಡಿ ಕ್ಲರ್ಕ್ ಅವರ ಕ್ಯಾಚ್ ಹಿಡಿಯುತ್ತಿದ್ದಂತೆ ಭಾರತೀಯ ವನಿತೆಯ ಸಂಭ್ರಮ ಮುಗಿಲು ಮುಟ್ಟಿತ್ತು.
ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಸೌತ್ ಆಫ್ರಿಕಾ ವಿರುದ್ಧದದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 298 ರನ್ಗಳು.
ಈ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಯಿತು. ಇತ್ತ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್, ಸೌತ್ ಆಫ್ರಿಕಾ ತಂಡದ ಕೊನೆಯ ಬ್ಯಾಟರ್ ನಾಡಿನ್ ಡಿ ಕ್ಲರ್ಕ್ ಅವರ ಕ್ಯಾಚ್ ಹಿಡಿಯುತ್ತಿದ್ದಂತೆ ಭಾರತೀಯ ವನಿತೆಯ ಸಂಭ್ರಮ ಮುಗಿಲು ಮುಟ್ಟಿತ್ತು.
ಇದೀಗ ಚಾಂಪಿಯನ್ ಪಟ್ಟಕ್ಕೇರುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರ್ತಿಯರು ಸಂಭ್ರಮಿಸಿದ ಪರಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗಿದೆ.

