ನಾಯಕ ಶುಭ್ಮನ್ ಗಿಲ್ಗೆ ಬೆನ್ನು ತಟ್ಟಿ ಶುಭಹಾರೈಸಿದ ರೋಹಿತ್, ಕೊಹ್ಲಿ; ವಿಡಿಯೋ ನೋಡಿ
Team India Leaves for Australia: ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ಏಕದಿನ ಹಾಗೂ ಟಿ20 ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಹೊರಟಿದೆ. ನೂತನ ನಾಯಕ ಶುಭ್ಮನ್ ಗಿಲ್ ನೇತೃತ್ವದಲ್ಲಿ ತಂಡ ದೆಹಲಿಯಿಂದ ಪ್ರಯಾಣ ಬೆಳೆಸಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿ ಬಳಿಕ ತಂಡ ಸೇರಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಗಿಲ್ಗೆ ಶುಭ ಹಾರೈಸಿದರು.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದಿರುವ ಟೀಂ ಇಂಡಿಯಾ ಇದೀಗ ಏಕದಿನ ಹಾಗೂ ಟಿ20 ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದೆ. ನೂತನ ನಾಯಕ ಶುಭ್ಮನ್ ಗಿಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಎಲ್ಲಾ ಆಟಗಾರರು ಒಟ್ಟಾಗಿ ದೆಹಲಿಯಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಬಳಿಕ ಟೀಂ ಇಂಡಿಯಾವನ್ನು ಕೂಡಿಕೊಂಡಿರುವ ರೋಹಿತ್ ಹಾಗೂ ಕೊಹ್ಲಿ, ಟೀಂ ಇಂಡಿಯಾದ 28 ನೇ ಏಕದಿನ ನಾಯಕರಾಗಿರುವ ಶುಭ್ಮನ್ ಗಿಲ್ರನ್ನು ವಿಮಾನ ನಿಲ್ದಾಣದಲ್ಲಿ ಬೆನ್ನು ತಟ್ಟಿ, ಅಪ್ಪುಗೆಯ ಮೂಲಕ ಶುಭಹಾರೈಸಿದರು.
ರೋಹಿತ್, ವಿರಾಟ್ ಮತ್ತು ಶುಭ್ಮನ್ ಗಿಲ್ ಹೊರತಾಗಿ, ಶ್ರೇಯಸ್ ಅಯ್ಯರ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್, ಹರ್ಷಿತ್ ರಾಣಾ, ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ ಮತ್ತು ಪ್ರಸಿದ್ಧ್ ಕೃಷ್ಣ ಸೇರಿದಂತೆ ಇತರ ಆಟಗಾರರು ಆಸ್ಟ್ರೇಲಿಯಾಕ್ಕೆ ಹಾರಿದರು.
ಭಾರತದ ಆಸ್ಟ್ರೇಲಿಯಾ ಪ್ರವಾಸವು ಅಕ್ಟೋಬರ್ 19 ರಂದು ಆರಂಭವಾಗಲಿದೆ. ಈ ಪ್ರವಾಸವು ಎಂಟು ಪಂದ್ಯಗಳ ವೈಟ್-ಬಾಲ್ ಸರಣಿಯನ್ನು ಒಳಗೊಂಡಿರುತ್ತದೆ, ಇದರಲ್ಲಿ ಮೂರು ಏಕದಿನ ಪಂದ್ಯಗಳು ಮತ್ತು ಐದು ಪಂದ್ಯಗಳ ಟಿ20 ಸರಣಿ ಇರುತ್ತದೆ. ಭಾರತ ತಂಡವು ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಎರಡನೇ ಏಕದಿನ ಪಂದ್ಯ ಅಕ್ಟೋಬರ್ 23 ರಂದು ಅಡಿಲೇಡ್‌ನಲ್ಲಿ ನಡೆಯಲಿದೆ. ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಗಲಿವೆ.
ಏಕದಿನ ಪಂದ್ಯಗಳ ನಂತರ ಟಿ20 ಸರಣಿ ನಡೆಯಲಿದೆ. ಮೊದಲ ಟಿ20 ಅಕ್ಟೋಬರ್ 29 ರಂದು ಕ್ಯಾನ್‌ಬೆರಾದಲ್ಲಿ ನಡೆಯಲಿದೆ. ಎರಡನೇ ಟಿ20 ಅಕ್ಟೋಬರ್ 31 ರಂದು ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಮೂರನೇ ಟಿ20 ನವೆಂಬರ್ 2 ರಂದು ಹೋಬಾರ್ಟ್‌ನಲ್ಲಿ, ನಾಲ್ಕನೇ ಟಿ20 ನವೆಂಬರ್ 6 ರಂದು ಗೋಲ್ಡ್ ಕೋಸ್ಟ್‌ನಲ್ಲಿ ಹಾಗೂ ಐದನೇ ಮತ್ತು ಕೊನೆಯ ಟಿ20 ನವೆಂಬರ್ 8 ರಂದು ಬ್ರಿಸ್ಬೇನ್‌ನಲ್ಲಿ ನಡೆಯಲಿದೆ. ಟಿ20 ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1:45 ಕ್ಕೆ ಪ್ರಾರಂಭವಾಗಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ