ಡ್ರೆಸ್ಸಿಂಗ್ ರೂಮ್ನಲ್ಲಿ ಕುಣಿದು ಕುಪ್ಪಳಿಸಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
India vs Australia: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 49.3 ಓವರ್ಗಳಲ್ಲಿ 264 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 48.1 ಓವರ್ಗಳಲ್ಲಿ 267 ರನ್ ಬಾರಿಸಿ 4 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಫೈನಲ್ಗೇರಿದೆ.
ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (71) ಹಾಗೂ ಅಲೆಕ್ಸ್ ಕ್ಯಾರಿ (63) ಅರ್ಧಶತಕದ ನೆರವಿನಿಂದ 264 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿ ಮಿಂಚಿದ್ದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅಜೇಯ 42 ರನ್ ಬಾರಿಸುವ ಮೂಲಕ ಭಾರತ ತಂಡವನ್ನು 48.1 ಓವರ್ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿ ಫೈನಲ್ಗೆ ಪ್ರವೇಶಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಡ್ರೆಸ್ಸಿಂಗ್ ರೂಮ್ನಲ್ಲಿ ಸಂಭ್ರಮಿಸಿದ್ದಾರೆ. ಈ ಸೆಲೆಬ್ರೇಷನ್ ವಿಡಿಯೋ ಇದೀಗ ವೈರಲ್ ಆಗಿದೆ.

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
