IND vs NED, ICC World Cup: ಚಿನ್ನಸ್ವಾಮಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ವಿಡಿಯೋ

IND vs NED, ICC World Cup: ಚಿನ್ನಸ್ವಾಮಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ವಿಡಿಯೋ

Vinay Bhat
|

Updated on: Nov 11, 2023 | 8:16 AM

India vs Netherlands, ICC ODI World Cup 2023: ಭಾನುವಾರ (ನವೆಂಬರ್ 12) ನಡೆಯಲಿರುವ ಟೂರ್ನಿಯ ಲೀಗ್ ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಇದಕ್ಕಾಗಿ ಭಾರತೀಯ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್‌ 2023 ರಲ್ಲಿ (ICC ODI World Cup) ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಆಡಿರುವ 8 ಪಂದ್ಯಗಳ ಪೈಕಿ ಎಂಟನ್ನೂ ಗೆದ್ದು ಬೀಗಿದೆ. ಏಳನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಬಳಿಕ ಭಾರತ ಅಧಿಕೃತವಾಗಿ ವಿಶ್ವಕಪ್‌ನ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಇದೀಗ ಟೀಮ್ ಇಂಡಿಯಾ ಎಂಟನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಭಾನುವಾರ (ನವೆಂಬರ್ 12) ನಡೆಯಲಿರುವ ಟೂರ್ನಿಯ ಲೀಗ್ ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಇದನ್ನೂ ಗೆದ್ದು ಸೋಲಿಲ್ಲದ ಸರದಾರನಾಗಲು ಎದುರು ನೋಡುತ್ತಿದೆ. ಇದಕ್ಕಾಗಿ ಭಾರತೀಯ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಹುಡುಗರು ಬ್ಯಾಟಿಂಗ್-ಬೌಲಿಂಗ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ