ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
|

Updated on:Jul 04, 2024 | 1:47 PM

T20 World Cup 2024: ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಗುರುವಾರ ಮುಂಜಾನೆ ಭಾರತಕ್ಕೆ ಆಗಮಿಸಿದೆ. ಈ ಆಗಮನದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಬಳಿಕ ಭಾರತ ತಂಡವು ಮುಂಬೈನತ್ತ ಪ್ರಯಾಣ ಬೆಳೆಸಿದೆ.

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್​ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್​ ಶಾ ಕೂಡ ಹಾಜರಿದ್ದರು.

ವಿಶ್ವಕಪ್ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ  ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ಭಾರತ ತಂಡದ ಆಟಗಾರರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ತೆರಳಿದ್ದಾರೆ. ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಏರ್ ಇಂಡಿಯಾ ಕಟ್ಟಡದಿಂದ ಪ್ರಾರಂಭವಾಗಲಿರುವ ಈ ವಿಜಯಯಾತ್ರೆಯು ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಗೊಳ್ಳಲಿದೆ.

ಇದಾದ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾದ ವಿಜಯೋತ್ಸವ ಜರುಗಲಿದೆ. ಇದೇ ವೇಳೆ ಭಾರತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಬಿಸಿಸಿಐ ಹಸ್ತಾಂತರಿಸಲಿದೆ.

Published On - 1:41 pm, Thu, 4 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ