ನ್ಯೂಜಿಲೆಂಡ್ ಪ್ರವಾಸಕ್ಕೆ ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ; ವಿಡಿಯೋ

ನ್ಯೂಜಿಲೆಂಡ್ ಪ್ರವಾಸಕ್ಕೆ ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ; ವಿಡಿಯೋ

Updated on: Oct 19, 2026 | 2:55 PM

ಟೀಂ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸ ಅಕ್ಟೋಬರ್ 22 ರಿಂದ ಆರಂಭವಾಗಲಿದೆ. ಈ ಪ್ರವಾಸದಲ್ಲಿ 5 ಟಿ20, 5 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳು ಸೇರಿದಂತೆ ಒಟ್ಟು 12 ಪಂದ್ಯಗಳು ನಡೆಯಲಿವೆ. ವೆಸ್ಟ್ ಇಂಡೀಸ್ ಸರಣಿ ಮುಗಿಸಿರುವ ಭಾರತ ತಂಡ, ಅಕ್ಟೋಬರ್ 19 ರಂದು ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸಿದೆ. ಈ ಮಹತ್ವದ ಸರಣಿಯ ಸಂಪೂರ್ಣ ವಿವರ ಇಲ್ಲಿದೆ.

ಟೀಂ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸವು ಇದೇ ಅಕ್ಟೋಬರ್ 22 ರಿಂದ ಪ್ರಾರಂಭವಾಗಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ ಮೂರು ಮಾದರಿಯ ಸರಣಿಗಳು ನಡೆಯಲಿವೆ. ಟೀಂ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸವು ಐದು ಟಿ20, ಐದು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳು ಸೇರಿದಂತೆ ಒಟ್ಟು 12 ಪಂದ್ಯಗಳನ್ನು ಒಳಗೊಂಡಿರುತ್ತದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಪ್ರಾರಂಭವಾಗಿ ಟೆಸ್ಟ್ ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್​ಗೆ ಪ್ರಯಾಣ ಬೆಳೆಸಿದೆ. ಬೆಂಗಳೂರಿನಲ್ಲಿ ಕೊನೆಯ ಟಿ20 ಪಂದ್ಯವನ್ನು ಆಡಿದ್ದ ಟೀಂ ಇಂಡಿಯಾ ಇಂದು ಅಂದರೆ ಅಕ್ಟೋಬರ್ 19 ರಂದು ಬೆಂಗಳೂರಿನಿಂದಲೇ ನ್ಯೂಜಿಲೆಂಡ್​ಗೆ ವಿಮಾನ ಹತ್ತಿದೆ. ಅದರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Loading...
Unable to load recommendations.
Follow Us
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More