IND vs AUS 5th T20I: ಬೆಂಗಳೂರಿಗೆ ಬಂದ ತಕ್ಷಣ ಟೀಮ್ ಇಂಡಿಯಾ ಆಟಗಾರರಿಗೆ ಸಿಕ್ಕ ಗೌರವ ಹೇಗಿತ್ತು ನೋಡಿ
Team India in Bengaluru: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಐದನೇ ಟಿ20 ಪಂದ್ಯಕ್ಕಾಗಿ ಬೆಂಗಳೂರಿಗೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಅದ್ಧೂರಿ ಸ್ವಾಗತ ಸಿಕ್ಕಿತು. ಶಾಲು ಹೊದಿಸಿ ಆಟಗಾರರನ್ನು ವೆಲ್ಕಂ ಮಾಡಿದರು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳು ತನ್ನ ಎಕ್ಸ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಂಡಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಶನಿವಾರ ಸಿಲಿಕಾನ್ ಸಿಟಿಗೆ ತಲುಪಿದರು. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಆಟಗಾರರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿತು. ಶಾಲು ಹೊದಿಸಿ ಆಟಗಾರರನ್ನು ವೆಲ್ಕಂ ಮಾಡಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಂಡಿದೆ. ಈಗಾಗಲೇ 3-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಹೀಗಾಗಿ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಬಹುದು. ಮತ್ತೊಂದೆಡೆ ಕೊನೆಯ ಪಂದ್ಯವನ್ನಾದರೂ ಗೆದ್ದು ತವರಿಗೆ ಮರಳುವ ಎಂಬ ಪ್ಲಾನ್ನಲ್ಲಿ ಆಸ್ಟ್ರೇಲಿಯಾವಿದೆ. ಹೀಗಾಗಿ ಇಂದಿನ ಐದನೇ ಟಿ20 ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos