AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd T20I: ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ವಿಡಿಯೋ ನೋಡಿ

IND vs AUS 2nd T20I: ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ವಿಡಿಯೋ ನೋಡಿ

Vinay Bhat
|

Updated on: Nov 26, 2023 | 8:41 AM

Share

Team India Practice session, India vs Australia 2nd T20I: ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಆಟಗಾರರು ಸ್ಟೇಡಿಯಂನಲ್ಲಿ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಜೊತೆಗೆ ಫುಟ್ಬಾಲ್ ಆಡಿ ಪ್ರ್ಯಾಕ್ಟೀಸ್ ನಡೆಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತ ಕಾಂಗರೂ ಪಡೆ ಕೂಡ ಪುಟಿದೇಳುವ ವಿಶ್ವಾಸದಲ್ಲಿದೆ.

ಇಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ (India vs Australia) ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇದಕ್ಕಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಎಲ್ಲ ಪ್ಲೇಯರ್ಸ್ ಸ್ಟೇಡಿಯಂನಲ್ಲಿ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಜೊತೆಗೆ ಫುಟ್ಬಾಲ್ ಆಡಿ ಪ್ರ್ಯಾಕ್ಟೀಸ್ ನಡೆಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತ ಕಾಂಗರೂ ಪಡೆ ಕೂಡ ಪುಟಿದೇಳುವ ವಿಶ್ವಾಸದಲ್ಲಿದೆ. ಇಂದಿನ ಪಂದ್ಯದಲ್ಲಿ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ಮತ್ತು ಗ್ಲೆನ್ ಮ್ಯಾಕ್ಸ್​ವೆನ್ ಕಣಕ್ಕಿಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ತಿರುವನಂತಪುರಂನಲ್ಲಿ ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More