IND vs AFG 1st T20I: ಕೊರೆವ ಚಳಿಯ ನಡುವೆ ಟೀಮ್ ಇಂಡಿಯಾ ಆಟಗಾರರ ಕಠಿಣ ಅಭ್ಯಾಸ: ವಿಡಿಯೋ ನೋಡಿ

IND vs AFG 1st T20I: ಕೊರೆವ ಚಳಿಯ ನಡುವೆ ಟೀಮ್ ಇಂಡಿಯಾ ಆಟಗಾರರ ಕಠಿಣ ಅಭ್ಯಾಸ: ವಿಡಿಯೋ ನೋಡಿ

Vinay Bhat
|

Updated on: Jan 11, 2024 | 11:24 AM

Team India: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಆಟಗಾರರು ವಿಪರೀತ ಚಳಿಯ ಬಗ್ಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಅವರು 12 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ ಎಂದು ತಿಳಿದಾಗ ಒಂದು ಕ್ಷಣ ಆಘಾತಕ್ಕೊಳಗಾದರು.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರ ಸ್ಟೇಡಿಯಂನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ (India vs Afghanistan) ಸಜ್ಜಾಗುತ್ತಿದೆ. ಇಂದು ರಾತ್ರಿ ಏಳು ಗಂಟೆಗೆ ಪಂದ್ಯ ಆಯೋಜನೆ ಮಾಡಲಾಗಿದೆ. ಇದಕ್ಕಾಗಿ ರೋಹಿತ್ ಶರ್ಮಾ ಪಡೆ ಕಡಿಮೆ ತಾಪಮಾನ ಮತ್ತು ಕೊರೆವ ಚಳಿಯ ನಡುವೆ ಮೈದಾನದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಆಟಗಾರರು ವಿಪರೀತ ಚಳಿಯ ಬಗ್ಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಅವರು 12 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ ಎಂದು ತಿಳಿದಾಗ ಒಂದು ಕ್ಷಣ ಆಘಾತಕ್ಕೊಳಗಾದರು. ಟೀಮ್ ಇಂಡಿಯಾದ ಎಲ್ಲ ಆಟಗಾರರು ಸ್ವೆಟರ್, ಗ್ಲೌಸ್​ಗಳನ್ನು ತೊಟ್ಟು ಅಭ್ಯಾಸ ನಡೆಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ