ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾದ ವಿಜಯಗೀತೆ ಹೇಗಿತ್ತು ನೋಡಿ..!
India Women vs South Africa Women, Final: ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ನ ಫೈನಲ್ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿ 52 ರನ್ಗಳಿಂದ ಸೋಲೊಪ್ಪಿಕೊಂಡಿದೆ.
2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಆಟಗಾರ್ತಿಯರು ವಿಶೇಷ ವಿಜಯಗೀತೆಯನ್ನು ಹಾಡುವ ಮೂಲಕ ಸಂಭ್ರಮಿಸಿದರು. ಈ ಹಾಡಿನ ತುಣುಕು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮನ್ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.

