ಬಳ್ಳಾರಿ ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆಗೆ ಬಂದ ವಿಮ್ಸ್ ಡಾಕ್ಟರ್​​​ಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Oct 09, 2024 | 12:53 PM

ಬಳ್ಳಾರಿ ಕೇಂದ್ರೀಯ ಕಾರಾಗೃಹದಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೆಂದು ವೈದ್ಯರು ಹೇಳಿದ್ದಾರೆ. ಜ್ಯೂನಿಯರ್ ವೈದ್ಯರು ಅಥವಾ ಇಂಟರ್ನ್​ಗಳು ದರ್ಶನ್ ಸಮಸ್ಯೆಗೆ ಪರಿಹಾರ ಒದಗಿಸಬಲ್ಲರೆ ಅನ್ನೋದೇ ಮುಖ್ಯ ಪ್ರಶ್ನೆ.

ಬಳ್ಳಾರಿ: ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆ ನಿಯಮಿತವಾಗಿ ನಡೆಯುತ್ತಿರುತ್ತದೆ. ನಟ ದರ್ಶನ್ ರನ್ನು ಇರಿಸಿರುವ ಬಳ್ಳಾರಿ ಸೆಂಟ್ರಲ್ ಜೈಲಿಗೆ ಇಂದು ಬಳ್ಳಾರಿಯ ವಿಮ್ಸ್ ವೈದ್ಯರು ಅಲ್ಲಿರುವ 388 ಕೈದಿಗಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯವಿರುವ ಸಾಮಗ್ರಿಗಳೊಂದಿಗೆ ಆಗಮಿಸಿದರು. ವಿಮ್ಸ್ ನಿಂದ ಹೌಸ್ ಸರ್ಜನ್​ಶಿಪ್ ನಲ್ಲಿರುವ ವೈದ್ಯರು ಮಾತ್ರ ಬಂದಂತಿದೆ, ನುರಿತ ಅಥವಾ ಪರಿಣಿತ ವೈದ್ಯರು ಬಂದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.