ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ!

Updated on: Mar 19, 2025 | 5:43 PM

ಹೈಫೈ ಕಾರ್ಪೋರೇಟ್ ಹೆಂಡತಿಯೊಬ್ಬಳು ಮದುವೆ ಬೇಕು, ಆದ್ರೆ ಸಂಸಾರ ಬೇಡ, ನನ್ನನ್ನು ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗತ್ತೆ ಎಂದು ಕಾಟ ಕೊಡುತ್ತಿದ್ದಾಳೆ ಎಂದು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು...ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಎನ್ನುವರು ಪತ್ನಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ.

ಬೆಂಗಳೂರು, (ಮಾರ್ಚ್​ 19): ಹೈಫೈ ಕಾರ್ಪೋರೇಟ್ ಹೆಂಡತಿಯೊಬ್ಬಳು ಮದುವೆ ಬೇಕು, ಆದ್ರೆ ಸಂಸಾರ ಬೇಡ, ನನ್ನನ್ನು ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗತ್ತೆ ಎಂದು ಕಾಟ ಕೊಡುತ್ತಿದ್ದಾಳೆ ಎಂದು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು…ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಎನ್ನುವರು ಪತ್ನಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದು, ಇದೀಗ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ಸಂಬಂದ ಪೊಲೀಸರು ತನಿಖೆ ಮಾಡುತ್ತಿದ್ದಾರೆ.‌ ಇನ್ನು ಶ್ರೀಕಾಂತ್ ತನಗಾದ ಕಿರುಕುಳದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

Published on: Mar 19, 2025 05:42 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More