‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್

Edited By:

Updated on: Mar 20, 2026 | 11:12 AM

Dhurandhar 2: ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ನಿಂತಿದೆ. ಈ ಚಿತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಸಿನಿಮಾ ನೋಡಲು ಟೆಕ್ನಿಕಲ್ ಗುರು ಅವರು ದುಬೈನಿಂದ ಭಾರತಕ್ಕೆಬಂದಿದ್ದಾರೆ. ಈ ಸಂದರ್ಭದ ವಿಡಿಯೋನ ಅವರು ಹಂಚಿಕೊಂಡರು. 

‘ಧುರಂಧರ್ 2’ ಸಿನಿಮಾ ಎಲ್ಲ ಕಡೆಗಳಲ್ಲಿ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಕೆಲವರು ಇದನ್ನು ಟೀಕಿಸುತ್ತಿದ್ದಾರೆ. ಟೆಕ್ನಿಕಲ್ ಗುರು ಎಂದೇ ಫೇಮಸ್ ಆದ ಗೌರವ್ ಚೌಧರಿ ಅವರು ಈ ಸಿನಿಮಾ ನೋಡಲು ದುಬೈ ಇಂದ ಬೆಂಗಳೂರಿಗೆ ಬಂದಿದ್ದಾರೆ. ಈ ಸಂದರ್ಭದ ವಿಡಿಯೋನ ಹಂಚಿಕೊಂಡಿದ್ದಾರೆ. ಅವರು ಸಿನಿಮಾ ನೋಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದಾರಂತೆ. ದುಬೈ ಸೇರಿದಂತೆ ಅನೇಕ ದೇಶಗಳಲ್ಲಿ ‘ಧುರಂಧರ್ 2’ ಚಿತ್ರವು ಬ್ಯಾನ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More