AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬೆಂಗಾವಲು ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಮೈಸೂರಿನಲ್ಲೇ ಬಾಕಿ

ಪ್ರಧಾನಿ ಮೋದಿ ಬೆಂಗಾವಲು ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಮೈಸೂರಿನಲ್ಲೇ ಬಾಕಿ

ರಾಮ್​, ಮೈಸೂರು
| Edited By: |

Updated on: Nov 14, 2026 | 9:01 AM

Share

ಪ್ರಧಾನಿ ನರೇಂದ್ರ ಮೋದಿಯವರ ಮೈಸೂರು ಭೇಟಿ ವೇಳೆ ಅವರ ಬೆಂಗಾವಲು ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಲಲಿತ್ ಮಹಲ್ ಹೆಲಿಪ್ಯಾಡ್‌ನಲ್ಲೇ ಉಳಿದಿರುವ ಸೇನಾ ಹೆಲಿಕಾಪ್ಟರ್ ಅನ್ನು ಸರಿಪಡಿಸಲು ಭಾರತೀಯ ವಾಯುಸೇನೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಹಾರಾಟದ ಸಂದರ್ಭದಲ್ಲಿ ದೋಷ ಕಾಣಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತೆಂಬ ಆತಂಕ ವ್ಯಕ್ತವಾಗಿದೆ.

ಮೈಸೂರು, ನವೆಂಬರ್ 14: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೈಸೂರು ಭೇಟಿ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆಯ ಸೇನಾ ಹೆಲಿಕಾಪ್ಟರ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಗೊತ್ತಾಗಿದೆ. ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಿದ ಪ್ರಧಾನಿಗಳು ವಾಪಸ್ ತೆರಳುವ ವೇಳೆ ಘಟನೆ ನಡೆದಿದೆ. ಮೈಸೂರಿನ ಲಲಿತ್ ಮಹಲ್ ಹೆಲಿಪ್ಯಾಡ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ನಿಂತಿದ್ದು, ಭಾರತೀಯ ವಾಯುಸೇನೆ (ಐಎಎಫ್) ಸಿಬ್ಬಂದಿಗಳು ಅದರ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪ್ರಧಾನಿ ಮೋದಿ ಮಧ್ಯಾಹ್ನ 3:20ರ ಸುಮಾರಿಗೆ ಮೈಸೂರಿಗೆ ಬಂದಿಳಿದಿದ್ದರು. ಮೂರು ಸೇನಾ ಹೆಲಿಕಾಪ್ಟರ್‌ಗಳಲ್ಲಿ ಅವರು ಆಗಮಿಸಿದ್ದು, ಅದರಲ್ಲಿ ಎರಡು ಬೆಂಗಾವಲು ಹೆಲಿಕಾಪ್ಟರ್‌ಗಳಾಗಿದ್ದವು. ಪ್ರಧಾನಿ ಅವರ ಕಾರ್ಯಕ್ರಮಗಳು ಮುಗಿದ ನಂತರ, ಎರಡು ಹೆಲಿಕಾಪ್ಟರ್‌ಗಳು ಹಾರಾಟ ನಡೆಸಿದವು. ಆದರೆ, ಒಂದು ಬೆಂಗಾವಲು ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆಗಲು ಸಾಧ್ಯವಾಗಲಿಲ್ಲ. ವಾಯುಸೇನೆ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಉಳಿದ ಎರಡು ಹೆಲಿಕಾಪ್ಟರ್‌ಗಳನ್ನು ಕಳುಹಿಸಿ, ದೋಷಪೂರಿತ ಹೆಲಿಕಾಪ್ಟರನ್ನು ಹೆಲಿಪ್ಯಾಡ್‌ನಲ್ಲೇ ನಿಲ್ಲಿಸಿದರು. ಸ್ಥಳದಲ್ಲಿ ಸ್ಥಳೀಯ ಪೊಲೀಸರನ್ನೂ ಭದ್ರತೆಗಾಗಿ ನಿಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More