ಪ್ರಧಾನಿ ಮೋದಿ ಬೆಂಗಾವಲು ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಮೈಸೂರಿನಲ್ಲೇ ಬಾಕಿ
ಪ್ರಧಾನಿ ನರೇಂದ್ರ ಮೋದಿಯವರ ಮೈಸೂರು ಭೇಟಿ ವೇಳೆ ಅವರ ಬೆಂಗಾವಲು ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಲಲಿತ್ ಮಹಲ್ ಹೆಲಿಪ್ಯಾಡ್‌ನಲ್ಲೇ ಉಳಿದಿರುವ ಸೇನಾ ಹೆಲಿಕಾಪ್ಟರ್ ಅನ್ನು ಸರಿಪಡಿಸಲು ಭಾರತೀಯ ವಾಯುಸೇನೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಹಾರಾಟದ ಸಂದರ್ಭದಲ್ಲಿ ದೋಷ ಕಾಣಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತೆಂಬ ಆತಂಕ ವ್ಯಕ್ತವಾಗಿದೆ.
ಮೈಸೂರು, ನವೆಂಬರ್ 14: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೈಸೂರು ಭೇಟಿ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆಯ ಸೇನಾ ಹೆಲಿಕಾಪ್ಟರ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಗೊತ್ತಾಗಿದೆ. ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಿದ ಪ್ರಧಾನಿಗಳು ವಾಪಸ್ ತೆರಳುವ ವೇಳೆ ಘಟನೆ ನಡೆದಿದೆ. ಮೈಸೂರಿನ ಲಲಿತ್ ಮಹಲ್ ಹೆಲಿಪ್ಯಾಡ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ನಿಂತಿದ್ದು, ಭಾರತೀಯ ವಾಯುಸೇನೆ (ಐಎಎಫ್) ಸಿಬ್ಬಂದಿಗಳು ಅದರ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪ್ರಧಾನಿ ಮೋದಿ ಮಧ್ಯಾಹ್ನ 3:20ರ ಸುಮಾರಿಗೆ ಮೈಸೂರಿಗೆ ಬಂದಿಳಿದಿದ್ದರು. ಮೂರು ಸೇನಾ ಹೆಲಿಕಾಪ್ಟರ್‌ಗಳಲ್ಲಿ ಅವರು ಆಗಮಿಸಿದ್ದು, ಅದರಲ್ಲಿ ಎರಡು ಬೆಂಗಾವಲು ಹೆಲಿಕಾಪ್ಟರ್‌ಗಳಾಗಿದ್ದವು. ಪ್ರಧಾನಿ ಅವರ ಕಾರ್ಯಕ್ರಮಗಳು ಮುಗಿದ ನಂತರ, ಎರಡು ಹೆಲಿಕಾಪ್ಟರ್‌ಗಳು ಹಾರಾಟ ನಡೆಸಿದವು. ಆದರೆ, ಒಂದು ಬೆಂಗಾವಲು ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆಗಲು ಸಾಧ್ಯವಾಗಲಿಲ್ಲ. ವಾಯುಸೇನೆ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಉಳಿದ ಎರಡು ಹೆಲಿಕಾಪ್ಟರ್‌ಗಳನ್ನು ಕಳುಹಿಸಿ, ದೋಷಪೂರಿತ ಹೆಲಿಕಾಪ್ಟರನ್ನು ಹೆಲಿಪ್ಯಾಡ್‌ನಲ್ಲೇ ನಿಲ್ಲಿಸಿದರು. ಸ್ಥಳದಲ್ಲಿ ಸ್ಥಳೀಯ ಪೊಲೀಸರನ್ನೂ ಭದ್ರತೆಗಾಗಿ ನಿಯೋಜಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
