ಹೋಳಿ ಹಬ್ಬದ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಯಾದವ್ ಒತ್ತಾಯ

|

Updated on: Mar 15, 2025 | 5:51 PM

ನವದೆಹಲಿ, (ಮಾರ್ಚ್ 15): ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಹೋಳಿ ಆಚರಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗೆ ಬೆದರಿಸಿ ಡ್ಯಾನ್ಸ್ ಮಾಡುವಂತೆ ಒತ್ತಾಯಿಸಿದ ವಿಡಿಯೋ ಕಾಣಿಸಿಕೊಂಡ ನಂತರ ಬಿಹಾರದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ ತೇಜ್ ಪ್ರತಾಪ್ ಯಾದವ್ ವೇದಿಕೆಯ ಮೇಲೆ ಕುಳಿತು, ಮೈಕ್ ಹಿಡಿದು, ಕೆಳಗೆ ಕುಳಿತಿರುವ ಜನರಿಗೆ ಸೂಚನೆ ನೀಡುತ್ತಿರುವುದನ್ನು ಕಾಣಬಹುದು. ಅವರು ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ಆದೇಶಿಸಿದ್ದಾರೆ. ಒಂದು […]

ನವದೆಹಲಿ, (ಮಾರ್ಚ್ 15): ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಹೋಳಿ ಆಚರಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗೆ ಬೆದರಿಸಿ ಡ್ಯಾನ್ಸ್ ಮಾಡುವಂತೆ ಒತ್ತಾಯಿಸಿದ ವಿಡಿಯೋ ಕಾಣಿಸಿಕೊಂಡ ನಂತರ ಬಿಹಾರದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ ತೇಜ್ ಪ್ರತಾಪ್ ಯಾದವ್ ವೇದಿಕೆಯ ಮೇಲೆ ಕುಳಿತು, ಮೈಕ್ ಹಿಡಿದು, ಕೆಳಗೆ ಕುಳಿತಿರುವ ಜನರಿಗೆ ಸೂಚನೆ ನೀಡುತ್ತಿರುವುದನ್ನು ಕಾಣಬಹುದು. ಅವರು ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ಆದೇಶಿಸಿದ್ದಾರೆ. ಒಂದು ವೇಳೆ ಡ್ಯಾನ್ಸ್ ಮಾಡದಿದ್ದರೆ ಅವರನ್ನು ಅಮಾನತುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಪಾಟ್ನಾದ ತೇಜ್ ಪ್ರತಾಪ್ ಅವರ ನಿವಾಸದಲ್ಲಿ ಆಯೋಜಿಸಲಾದ ಹೋಳಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ