Loading video

Video: ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ಕಾಣಿಸಿಕೊಂಡ ತೇಜ್​ಪ್ರತಾಪ್ ಯಾದವ್

Updated on: Jun 15, 2025 | 11:13 AM

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರ ಮತ್ತು ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರು ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ನಡೆದಾಡಿರುವ ವಿಡಿಯೋ ವೈರಲ್ ಆಗಿದೆ. ಕಾಶಿ ವಿಶ್ವನಾಥ ದೇವಾಲಯ ಆಡಳಿತವು ತನಿಖೆಯನ್ನು ಪ್ರಾರಂಭಿಸಿದೆ.ಈ ಹೆಚ್ಚಿನ ಭದ್ರತಾ ವಲಯವು ಕಾಶಿ ವಿಶ್ವನಾಥ ಕಾರಿಡಾರ್‌ನೊಳಗಿನ ಗರ್ಭಗುಡಿಯ ಆವರಣವನ್ನು ಒಳಗೊಂಡಿದೆ.

ಅಲ್ಲಿ ಮೊಬೈಲ್ ಫೋನ್‌ಗಳು ಮತ್ತು ಅನಧಿಕೃತ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಂಪೂರ್ಣ ತನಿಖೆ ನಡೆಸಿ ಯಾವುದೇ ಸಿಬ್ಬಂದಿ ಜವಾಬ್ದಾರರಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.ದೇವಾಲಯ ಸಂಕೀರ್ಣದೊಳಗೆ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎರಡೂ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಉಲ್ಲಂಘನೆ ದೃಢಪಟ್ಟರೆ, ಭಾಗಿಯಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ದೇವಾಲಯದ ವಿಶ್ವಭೂಷಣ್ ಮಿಶ್ರಾ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ