ಮಂಜುನಾಥ್, ಭರತ್ ಭೂಷಣ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಮತ್ತು ಭರತ್ ಭೂಷಣ್ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಿಸುವುದಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮ ಕೇಳಿ ದಾಳಿ ಮಾಡುತ್ತಾರೆಯೇ ಎಂಬ ಸಚಿವ ತಿಮ್ಮಾಪುರ ಹೇಳಿಕೆಗೆ ತಿರುಗೇಟು ನೀಡಿದರು.
ಬೆಂಗಳೂರು, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಹತ್ಯೆಯಾಗಿದ್ದು, ಅವರ ಕುಟುಂಬ, ಜಾತಿ, ಅಂತಸ್ತು ಕೇಳಿ ಭಯೋತ್ಪಾದಕರು ದಾಳಿ ಮಾಡಿಲ್ಲ. ಹಿಂದೂ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾರೆ. ಅವರ ಜತೆ ನಿಲ್ಲಬೇಕಾದ್ದು ಇಡೀ ಹಿಂದೂ ಧರ್ಮದವರ ಕರ್ತವ್ಯ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಅಲ್ಲದೆ, ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆ ಕೊಡಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು. ಭಯೋತ್ಪಾದಕರು ಗುಂಡಿನ ದಾಳಿ ನಡೆಸುವಾಗ ಧರ್ಮ ಕೇಳುವುದಿಲ್ಲ ಎಂಬ ಸಚಿವ ಆರ್ಬಿ ತಿಮ್ಮಾಪುರ ಹೇಳಿಕೆಗೂ ತೇಜಸ್ವಿ ಸೂರ್ಯ ತುಸು ಖಾರವಾಗಿಯೇ ತಿರುಗೇಟು ನೀಡಿದ್ದಾರೆ.
Published on: Apr 28, 2025 02:33 PM