ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ
ಮೆಟ್ರೋ ದರ ಏರಿಕೆ ಖಂಡಿಸಿ ಬೆಂಗಳೂರಿನ ಆರ್ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಯ, ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಈ ಸರ್ಕಾರ ಬಂಧಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು, ಫೆಬ್ರವರಿ: ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ಬೆಂಗಳೂರಿನ ಆರ್ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಬಂಧನವಾಗುತ್ತದೆ. ಉತ್ತಮ ಬೆಂಗಳೂರಿಗಾಗಿ ಹೋರಾಟ ಮಾಡುವುದು ಅಪರಾಧವಾಗಿದ್ದರೆ, ನಾನು ಸಾವಿರ ಬಾರಿ ಬಂಧನಕ್ಕೊಳಗಾಗಲು ಸಿದ್ಧ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಮೆಟ್ರೋ ದರ ಏರಿಕೆ ಮಧ್ಯಮ ವರ್ಗದ ಜನರಿಗೆ ಭಾರವಾಗಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

