ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

Updated on: Feb 09, 2026 | 11:15 AM

ಮೆಟ್ರೋ ದರ ಏರಿಕೆ ಖಂಡಿಸಿ ಬೆಂಗಳೂರಿನ ಆರ್​ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಯ, ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಈ ಸರ್ಕಾರ ಬಂಧಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು, ಫೆಬ್ರವರಿ: ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ಬೆಂಗಳೂರಿನ ಆರ್​ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಬಂಧನವಾಗುತ್ತದೆ. ಉತ್ತಮ ಬೆಂಗಳೂರಿಗಾಗಿ ಹೋರಾಟ ಮಾಡುವುದು ಅಪರಾಧವಾಗಿದ್ದರೆ, ನಾನು ಸಾವಿರ ಬಾರಿ ಬಂಧನಕ್ಕೊಳಗಾಗಲು ಸಿದ್ಧ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಮೆಟ್ರೋ ದರ ಏರಿಕೆ ಮಧ್ಯಮ ವರ್ಗದ ಜನರಿಗೆ ಭಾರವಾಗಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 09, 2026 11:11 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More