ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ!
ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ಶಾಸಕ ರಾಮಮೂರ್ತಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ನಂತರ ಪೊಲೀಸರು ತೇಜಸ್ವಿ ಸೂರ್ಯ ಮತ್ತು ರಾಮಮೂರ್ತಿ ಅವರನ್ನು ವಶಕ್ಕೆ ಪಡೆದ್ದಾರೆ.
ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ಶಾಸಕ ರಾಮಮೂರ್ತಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ನಂತರ ಪೊಲೀಸರು ತೇಜಸ್ವಿ ಸೂರ್ಯ ಮತ್ತು ರಾಮಮೂರ್ತಿ ಅವರನ್ನು ವಶಕ್ಕೆ ಪಡೆದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ

