ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತದೆ- ತೇಜಸ್ವಿ ಸೂರ್ಯ

Edited By:

Updated on: Apr 04, 2024 | 2:07 PM

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್​ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯದಿನವಾದ್ದರಿಂದ ಬೃಹತ್​ ಮೆರವಣಿಗೆ ಮೂಲಕ ಜಯನಗರದ BBMP ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತೇಜಸ್ವಿ ಸೂರ್ಯಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದರು. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್​ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ನೋ ಬಾಲ್ ಮೇಲೆ ಸಿಕ್ಸರ್ ಹೊಡೆಯುತ್ತೇನೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More