ತೆಲಂಗಾಣ ಚುನಾವಣೆ 2023 ಲೈವ್ : ಅನೇಕ ಮತಗಟ್ಟೆಗಳಲ್ಲಿ ಘರ್ಷಣೆ, ಲಾಠಿ ಬೀಸುತ್ತಿರುವ ಪೊಲೀಸರು
Telangana Elections 2023: ಖಮ್ಮಮ್ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ವೇಳೆ ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿದರು.
ತೆಲಂಗಾಣ ವಿಧಾನಸಭೆ ಚುನಾವಣೆ (Telangana Assembly Elections 2023) ಮತದಾನ ಶಾಂತಿಯುತವಾಗಿ ನಡೆಯುತ್ತಿರುವಾಗಲೇ ಅಲ್ಲೊಂದು ಇಲ್ಲೊಂದು ಸಣ್ಣಪುಟ್ಟ ಘರ್ಷಣೆಗಳು ನಡೆಯುತ್ತಿವೆ. ಯಾವುದೇ ರೀತಿಯ ಘರ್ಷಣೆ, ಅಶಾಂತಿಗೆ ಆಸ್ಪದ ಕೊಡದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳಗ್ಗೆ 9 ಗಂಟೆಯವರೆಗೆ ರಾಜ್ಯಾದ್ಯಂತ ಶೇ. 7.78ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ನಾಗರ್ ಕರ್ನೂಲ್‌ನ ಅಮ್ರಾಬಾದ್ ಮಂಡಲದಲ್ಲಿ ಮತದಾನದ ವೇಳೆ ಉದ್ವಿಗ್ನತೆ ಉಂಟಾಗಿತ್ತು. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಇದರಿಂದ ಪೊಲೀಸರು ಗುಂಪುಗೂಡುತ್ತಿದ್ದ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿದರು(Lathi charge).
ಖಮ್ಮಮ್ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ವೇಳೆ ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿದರು. ಅದೇ ರೀತಿ ನಿರ್ಮಲ್ ಜಿಲ್ಲೆ ಭೈಂಸಾದಲ್ಲಿ ಕೆಲವರು ಕಂದುಬಣ್ಣ ದ ಇಂಕ್ ಹಿಡಿದು ಮತದಾನ ಮಾಡಲು ಬಂದಾಗ, ಪೊಲೀಸರು ತಡೆದಿದ್ದಾರೆ.
ಇಬ್ರಾಹಿಂಪಟ್ಟಣ ಕ್ಷೇತ್ರದ ಖಾನಾಪುರದ ಮತಗಟ್ಟೆಯಲ್ಲಿ ಬಿಆರ್‌ಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಎರಡು ಗುಂಪುಗಳನ್ನು ಚದುರಿಸಿದರು.
ಮತದಾನದ ವೇಳೆ ಜನಗಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪಟ್ಟಣದ ಬೂತ್ 244ರ ಬಳಿ ಬಿಜೆಪಿ ಮತ್ತು ಬಿಆರ್‌ಎಸ್ ಮುಖಂಡರು ಬಂದಾಗ ಘರ್ಷಣೆ ನಡೆಯಿತು. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಆದರೆ ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸುವ ಮೂಲಕ ಪರಿಸ್ಥಿತಿ ಹತೋಟಿಗೆ ತಂದರು. ಇದೇ ವೇಳೆ ಅಲ್ಲೊಂದು ಇಲ್ಲೊಂದು ಸಣ್ಣಪುಟ್ಟ ಘರ್ಷಣೆ ಹೊರತುಪಡಿಸಿದರೆ ಕೆಲವೆಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಯಾವುದೇ ಘರ್ಷಣೆ ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ