ಶಾಲೆಯಲ್ಲಿ ಆಟವಾಡುತ್ತಿದ್ದಾಗ ಕುಸಿದುಬಿದ್ದು ಸಾವನ್ನಪ್ಪಿದ ಬಾಲಕ
ತೆಲಂಗಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಿವಿ ಮತ್ತು ಮೂಗಿನಿಂದ ರಕ್ತಸ್ರಾವವಾಗಿ ಶಾಲಾ ಮೈದಾನದಲ್ಲಿ 10ನೇ ತರಗತಿಯ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಶಾಲೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಘಟನೆ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿ ನೆಲದ ಮೇಲೆ ಕುಸಿದು ಬೀಳುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
ತೆಲಂಗಾಣ, ಸೆಪ್ಟೆಂಬರ್ 11: ತೆಲಂಗಾಣದ ಹನುಮಕೊಂಡ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಶಾಲೆಯ ಮೈದಾನದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ (Shocking News) ನಡೆದಿದೆ. ಶಾಲೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿ ನೆಲದ ಮೇಲೆ ಕುಸಿದು ಬೀಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೇ ಸ್ಥಳದಲ್ಲಿದ್ದ ಶಿಕ್ಷಕ ಮತ್ತು ಇತರ ವಿದ್ಯಾರ್ಥಿಗಳು ಕೂಡಲೆ ಆತನನ್ನು ಎತ್ತಿಕೊಂಡು ಹೋಗಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಯನ್ನು ಜಯಂತ್ (15) ಎಂದು ಗುರುತಿಸಲಾಗಿದೆ, ಶಾಲಾ ಮೈದಾನದಲ್ಲಿ ಕುಸಿದು ಬಿದ್ದು ಸಾವು ಸಂಭವಿಸಿದೆ. ಪ್ರಜ್ಞೆ ತಪ್ಪಿ ಬಿದ್ದ ವೇಳೆ ಆತನ ಮೂಗು ಮತ್ತು ಕಿವಿಯಿಂದ ರಕ್ತ ಸೋರುತ್ತಿತ್ತು. ಆತನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ಬಾಲಕ ಆಸ್ಪತ್ರೆ ತಲುಪುವ ಮೊದಲೇ ಮೃತಪಟ್ಟಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ