AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ಅಕ್ಷಯ್​ ಪಲ್ಲಮಜಲು​​
|

Updated on:Mar 23, 2026 | 10:54 AM

Share

ತೆಲಂಗಾಣದ ಪಾಲಾಡುಗು ಗ್ರಾಮದಲ್ಲಿ 11 ವರ್ಷದ ಬಾಲಕ ಅನಿರುದ್ಧನಿಗೆ ವೇಗದ ಕಾರು ಡಿಕ್ಕಿ ಹೊಡೆದ ಭೀಕರ ಅಪಘಾತ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ರಸ್ತೆ ದಾಟುವಾಗ ನಡೆದ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾರಿನ ಅತಿವೇಗ (109 ಕಿಮೀ/ಗಂ) ಅಥವಾ ಬಾಲಕನ ನಿರ್ಲಕ್ಷ್ಯವೇ ಕಾರಣವೇ ಎಂಬ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಇದು ರಸ್ತೆ ಸುರಕ್ಷತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ, ಚಾಲಕರು ಮತ್ತು ಪಾದಚಾರಿಗಳ ಜವಾಬ್ದಾರಿಯನ್ನು ನೆನಪಿಸುತ್ತದೆ.

ತೆಲಂಗಾಣ, ಮಾ.23: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಎಂದು ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ ಪಾಲಾಡುಗು ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಈ ಬಾಲಕನ್ನು ಯಾವ ಊರಿನವರು ಹಾಗೂ ಆತನ ಕುಟುಂಬದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇನ್ನು ಆ ಬಾಲಕನ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೆಲವರು ಬಾಲಕನ ನಿರ್ಲಕ್ಷ್ಯವನ್ನು ಹೊಣೆಮಾಡಿದರೆ, ಇನ್ನೂ ಕೆಲವರು ಕಾರಿನ ಅತಿವೇಗ (ಸುಮಾರು 109 ಕಿಮೀ/ಗಂ)ವೇ ಪ್ರಮುಖ ಕಾರಣ ಎಂದು ವಾದಿಸುತ್ತಿದ್ದಾರೆ. ಈ ದುರ್ಘಟನೆ ರಸ್ತೆ ಸುರಕ್ಷತೆ ಎಲ್ಲರ ಜವಾಬ್ದಾರಿಯಾಗಿದೆ ಎಂಬುದನ್ನು ಮತ್ತೆ ನೆನಪಿಸುತ್ತದೆ. ಚಾಲಕರು ವೇಗ ನಿಯಂತ್ರಿಸಿಕೊಂಡು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಪಾದಚಾರಿಗಳು, ವಿಶೇಷವಾಗಿ ಮಕ್ಕಳು, ರಸ್ತೆ ದಾಟುವಾಗ ಜಾಗ್ರತೆ ವಹಿಸುವುದು ಅತ್ಯಂತ ಅಗತ್ಯ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 23, 2026 10:54 AM
Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More