Video: ನ್ಯಾಯಾಲಯದ ಆವರಣದಲ್ಲೇ ಹೃದಯಾಘಾತದಿಂದ ಪ್ರಾಣಬಿಟ್ಟ ಹೈಕೋರ್ಟ್ ವಕೀಲ
ಲಂಗಾಣದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೈಕೋರ್ಟ್ ಆವರಣದಲ್ಲಿ ವಕೀಲರೊಬ್ಬರು ಹೃದಯಾಘಾತದಿಂದ ಹಠಾತ್ತನೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಈ ವಿಡಿಯೋದಲ್ಲಿ ವಕೀಲರೊಬ್ಬರು ಬೆಂಚ್ ಮೇಲೆ ಕುಳಿತಿದ್ದರು ಅಲ್ಲೇ ಕುಸಿದುಬಿದ್ದಿದ್ದಾರೆ.
ಹೈದರಾಬಾದ್, ಆಗಸ್ಟ್ 08: ತೆಲಂಗಾಣದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೈಕೋರ್ಟ್ ಆವರಣದಲ್ಲಿ ವಕೀಲರೊಬ್ಬರು ಹೃದಯಾಘಾತದಿಂದ ಹಠಾತ್ತನೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಈ ವಿಡಿಯೋದಲ್ಲಿ ವಕೀಲರೊಬ್ಬರು ಬೆಂಚ್ ಮೇಲೆ ಕುಳಿತಿದ್ದರು ಅಲ್ಲೇ ಕುಸಿದುಬಿದ್ದಿದ್ದಾರೆ.
ಅವರು ಅಲ್ಲಿ ಕಳಿತುಕೊಂಡಯ ಎಷ್ಟು ಸಮಯವಾಗಿತ್ತು ಎಂಬುದು ತಿಳಿದುಬಂದಿಲ್ಲ. ಯಾವಾಗ ಅವರ ಕೈಯಲ್ಲಿದ್ದ ಮೊಬೈಲ್ ಕೆಳಗೆ ಬಿತ್ತೋ ಆಗ ಅಲ್ಲಿದ್ದವರು ಓಡಿ ಹೋಗಿ ನೋಡಿದಾಗ ಅಷ್ಟರಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಮೃತರನ್ನು ಖಮ್ಮಂ ಜಿಲ್ಲೆಯ ಸಿಂಗರೇಣಿ ಮಂಡಲದ ಗೇಟ್ ಕರೆಪಲ್ಲಿ ಗ್ರಾಮದ ನಿವಾಸಿ 45 ವರ್ಷದ ಪರಸಾ ಅನಂತ ನಾಗೇಶ್ವರ ರಾವ್ ಎಂದು ಗುರುತಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ