Video: ಪೊಲೀಸರು ಹಿಡಿದಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಹಿಡಿದಿದ್ದಕ್ಕೆ ಕೋಪಗೊಂಡು ಬೆಂಕಿ ಹಚ್ಚಿಕೊಂಡು ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ಘಟನೆ ಪೊಲೀಸ್ ಠಾಣೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಠಾಣೆಯ ಆವರಣದೊಳಗೆ ಪೊಲೀಸ್ ಅಧಿಕಾರಿಯ ಮುಂದೆಯೇ ವ್ಯಕ್ತಿಯೊಬ್ಬರು ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
ತೆಲಂಗಾಣ, ಜುಲೈ 30: ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಹಿಡಿದಿದ್ದಕ್ಕೆ ಕೋಪಗೊಂಡು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ಘಟನೆ ಪೊಲೀಸ್ ಠಾಣೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಪೊಲೀಸ್ ಠಾಣೆಯ ಆವರಣದೊಳಗೆ ಪೊಲೀಸ್ ಅಧಿಕಾರಿಯ ಮುಂದೆಯೇ ವ್ಯಕ್ತಿಯೊಬ್ಬರು ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ರವಿಲ್ಲ ನರಸಿಂಹ ಎಂದು ಗುರುತಿಸಲಾದ ಯುವಕನನ್ನು ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಹಿಡಿಯಲಾಗಿತ್ತು. ಪೊಲೀಸರು ಧೈರ್ಯ ಪ್ರದರ್ಶಿಸಿ ಅವರನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

