AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಿಯೋಗ: ತೆಲಂಗಾಣಕ್ಕೂ ನೀರು ಹರಿಸುವಂತೆ ಮನವಿ

ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಿಯೋಗ: ತೆಲಂಗಾಣಕ್ಕೂ ನೀರು ಹರಿಸುವಂತೆ ಮನವಿ

ರಮೇಶ್ ಬಿ. ಜವಳಗೇರಾ
|

Updated on: Sep 23, 2026 | 7:12 PM

Share

ಕರ್ನಾಟಕದಲ್ಲೇ ಮಳೆ ಇಲ್ಲದೇ ಜಲಾಶಯಗಳ ಖಾಲಿ ಖಾಲಿಯಾಗಿವೆ. ಇದರ ಮಧ್ಯೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ. ಇದರ ಬೆನ್ನಲ್ಲೇ ಇತ್ತ ತೆಲಂಗಾಣಕ್ಕೂ ನೀರು ಹರಿಸುವಂತೆ ಕರ್ನಾಟಕಕ್ಕೆ ಮನವಿ ಬಂದಿದೆ. ಹೌದು...ತೆಲಂಗಾಣ ಸಚಿವರು, ಶಾಸಕರ ನಿಯೋಗ ಇಂದು (ಸೆ.23) ವಿಧಾನಸೌಧದ ಕೊಠಡಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ತೆಲಂಗಾಣಕ್ಕೆ ಕೃಷ್ಣಾ ನದಿಯಿಂದ ನೀರು ಹರಿಸುವಂತೆ ಮನವಿ ಮಾಡಿದೆ. ಇದಕ್ಕೆ ಸಿಎಂ ಡಿಕೆಶಿ ಸಕಾರಾತ್ಮಕ ಸ್ಪಂದಿಸಿದ್ದಾರೆ. ಇದಕ್ಕೆ ತೆಲಂಗಾಣ ಸಿಎಂ ರೇವಂತೆ ರೆಡ್ಡಿ ಅವರು ಡಿಕೆಶಿಗೆ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 23):  ಕರ್ನಾಟಕದಲ್ಲೇ ಮಳೆ ಇಲ್ಲದೇ ಜಲಾಶಯಗಳ ಖಾಲಿ ಖಾಲಿಯಾಗಿವೆ. ಇದರ ಮಧ್ಯೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ. ಇದರ ಬೆನ್ನಲ್ಲೇ ಇತ್ತ ತೆಲಂಗಾಣಕ್ಕೂ ನೀರು ಹರಿಸುವಂತೆ ಕರ್ನಾಟಕಕ್ಕೆ ಮನವಿ ಬಂದಿದೆ. ಹೌದು…ತೆಲಂಗಾಣ ಸಚಿವರು, ಶಾಸಕರ ನಿಯೋಗ ಇಂದು (ಸೆ.23) ವಿಧಾನಸೌಧದ ಕೊಠಡಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ತೆಲಂಗಾಣಕ್ಕೆ ಕೃಷ್ಣಾ ನದಿಯಿಂದ ನೀರು ಹರಿಸುವಂತೆ ಮನವಿ ಮಾಡಿದೆ. ಇದಕ್ಕೆ ಸಿಎಂ ಡಿಕೆಶಿ ಸಕಾರಾತ್ಮಕ ಸ್ಪಂದಿಸಿದ್ದಾರೆ. ಇದಕ್ಕೆ ತೆಲಂಗಾಣ ಸಿಎಂ ರೇವಂತೆ ರೆಡ್ಡಿ ಅವರು ಡಿಕೆಶಿಗೆ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More