ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ: ರಾತ್ರಿಯಿಡೀ ಚಾರ್ಜ್‌ಗೆ ಇಟ್ಟಿದ್ದೇ ಇದಕ್ಕೆ ಕಾರಣ

Updated on: Aug 19, 2026 | 5:17 PM

ತೆಲಂಗಾಣದ ಬಿಜ್ವಾರ್ ಗ್ರಾಮದಲ್ಲಿ ಮೊಬೈಲ್ ಫೋನ್ ಸ್ಫೋಟಗೊಂಡ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್, ಜೇಬಿನಿಂದ ಹೊರತೆಗೆದ ಕೂಡಲೇ ಸ್ಫೋಟ ಸಂಭವಿಸಿದ್ದರಿಂದ ವ್ಯಕ್ತಿಗೆ ಯಾವುದೇ ಹಾನಿಯಾಗಲಿಲ್ಲ. ರಾತ್ರಿಯಿಡೀ ಚಾರ್ಜಿಂಗ್‌ಗೆ ಇಟ್ಟಿದ್ದರಿಂದ ಬ್ಯಾಟರಿ ಅತಿಯಾಗಿ ಬಿಸಿಯಾಗಿ ಸ್ಫೋಟಗೊಂಡಿದೆ ಎಂದು ಶಂಕಿಸಲಾಗಿದೆ. ಇಂತಹ ಅಪಾಯಗಳನ್ನು ತಪ್ಪಿಸಲು ಸುರಕ್ಷತಾ ಕ್ರಮಗಳು ಮತ್ತು ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ತೆಲಂಗಾಣ, ಆ.19: ನಾರಾಯಣಪೇಟೆ ಜಿಲ್ಲೆಯ ಉತ್ಪಕೂರ್ (Utkur) ಮಂಡಲದ ಬಿಜ್ವಾರ್ ಗ್ರಾಮದಲ್ಲಿ ಮೊಬೈಲ್ ಫೋನ್ ಒಂದ ದಿಢೀರನೆ ಭಾರಿ ಸದ್ದಿನೊಂದಿಗೆ ಸ್ಪೋಟಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್, ಜೇಬಿನಿಂದ ಫೋನ್ ಹೊರತೆಗೆದ ತಕ್ಷಣವೇ ಈ ಸ್ಪೋಟ ಸಂಭವಿಸಿದ್ದರಿಂದ ಶರೀರಕ್ಕೆ ಯಾವುದೇ ಹಾನಿಯಾಗದೆ ಭಾರಿ ಅನಾಹುತವೊಂದು ತಪ್ಪಿದೆ. ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ಫೋನ್ ಅನ್ನು ಜೇಬಿನಿಂದ ಹೊರತೆಗೆಯುತ್ತಿದ್ದಂತೆ ಅದು ಹಠಾತ್ತಾಗಿ ಭಾರಿ ಸದ್ದಿನೊಂದಿಗೆ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ಸಮಯಪ್ರಜ್ಞೆಯಿಂದ ಮೊಬೈಲ್ ಅನ್ನು ಜೇಬಿನಿಂದ ಹೊರತೆಗೆದು ದೂರ ಎಸೆದಿದ್ದರಿಂದ ವ್ಯಕ್ತಿಗೆ ಯಾವುದೇ ಅಪಾಯವಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಬೈಲ್ ಫೋನ್ ಅನ್ನು ರಾತ್ರಿಯಿಡೀ (Overnight) ಚಾರ್ಜಿಂಗ್‌ಗೆ ಇಟ್ಟು ಬಳಸಿದ್ದೇ ಈ ಸಡನ್ ಬ್ಯಾಟರಿ ಸ್ಪೋಟಕ್ಕೆ (Overheating) ಮುಖ್ಯ ಕಾರಣ ಎಂದು ಶಂಕಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More