Assembly session: ಸದನದಲ್ಲಿ ಅಸಭ್ಯ ವರ್ತನೆ ಮತ್ತು ಪೀಠಕ್ಕೆ ಅಗೌರವದಿಂದ ನಡೆದುಕೊಂಡ 10 ಬಿಜೆಪಿ ಶಾಸಕರು ಅಧಿವೇಶನ ಮುಗಿಯುವವರೆಗೆ ಸಸ್ಪೆಂಡ್

ಸಭಾಪತಿ ಯುಟಿ ಖಾದರ್; ಪೀಠಕ್ಕೆ, ಸದನಕ್ಕೆ ಅಗೌರವ ಉಂಟಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ, ಇಂಥ ದುರ್ವರ್ತನೆ ಸದನ ಯಾವತ್ತೂ ಸಹಿಸುವುದಿಲ್ಲ ಅಂತ ಹೇಳಿ 10 ಸದಸ್ಯರನ್ನು ಹೆಸರಿಸಿದರು.

Assembly session: ಸದನದಲ್ಲಿ ಅಸಭ್ಯ ವರ್ತನೆ ಮತ್ತು ಪೀಠಕ್ಕೆ ಅಗೌರವದಿಂದ ನಡೆದುಕೊಂಡ 10 ಬಿಜೆಪಿ ಶಾಸಕರು ಅಧಿವೇಶನ ಮುಗಿಯುವವರೆಗೆ ಸಸ್ಪೆಂಡ್
|

Updated on: Jul 19, 2023 | 6:43 PM

ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಸದನದ ಬಾವಿ ಮತ್ತು ಸಭಾಧ್ಯಕ್ಷರ ಪೀಠದ ಬಳಿಗೆ ನುಗ್ಗಿ ಪೇಪರ್ ಗಳನ್ನು ಹರಿದು ಆಗ ಪೀಠದಲ್ಲಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ (Rudrappa Lamani) ಅವರ ಮೇಲೆ ಎಸೆದು ದಾಂಧಲೆ ನಡೆಸಿದ ಬಿಜೆಪಿಯ 10 ಶಾಸಕರನ್ನು ಬಜೆಟ್ ಅಧಿವೇಶನ (Budget Session) ಮುಗಿಯುವವರೆಗೆ ಸದನದಿಂದ ಸಸ್ಪೆಂಡ್ ಮಾಡಲಾಯಿತು. ಡಾ ಸಿಎನ್ ಅಶ್ವಥ್ ನಾರಾಯಣ, ವೇದವ್ಯಾಸ ಕಾಮತ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಅರವಿಂದ ಬೆಲ್ಲದ್, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ, ಭರತ್ ಶೆಟ್ಟಿ-ಇವರನ್ನು ಅಧಿವೇಶನ ಮುಗಿಯುವರೆಗೆ ಸಸ್ಪೆಂಡ್ ಮಾಡಲಾಗಿದೆ. ಅದಕ್ಕೂ ಮೊದಲು ಸಭಾಪತಿ ಯುಟಿ ಖಾದರ್; ಪೀಠಕ್ಕೆ, ಸದನಕ್ಕೆ ಅಗೌರವ ಉಂಟಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ, ಇಂಥ ದುರ್ವರ್ತನೆ ಸದನ ಯಾವತ್ತೂ ಸಹಿಸುವುದಿಲ್ಲ ಅಂತ ಹೇಳಿ 10 ಸದಸ್ಯರನ್ನು ಹೆಸರಿದರು. ಬಳಿಕ ಕಾನೂನು ಮತ್ತ ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ (HK Patil) ಸದಸ್ಯರ ಹೆಸರುಗಳನ್ನು ಓದಿ ಅವರೆಲ್ಲ ಸದನದಲ್ಲಿ ಅಸಭ್ಯ ಮತ್ತು ಪೀಠಕ್ಕೆ ಅಗೌರವ ಉಂಟಾಗುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮಾವಳಿ 348 ರ ಮೇರೆಗೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಬೇಕೆಂದು ಪ್ರಸ್ತಾವ ಮಂಡಿಸಿದರು. ಅದಾದ ಮೇಲೆ ಸಭಾಧ್ಯಕ್ಷರು ಪ್ರಸ್ತಾವನೆಯನ್ನು ಮತಕ್ಕೆ ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​