ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಭೀಕರ ದೃಶ್ಯ ಸೆರೆ

Edited By:

Updated on: May 03, 2026 | 4:47 PM

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್​​ನಲ್ಲಿ ಸೆರೆಯಾಗಿದೆ.

ಮಂಡ್ಯ, (ಮೇ 03): ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್​​ನಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More