ಸಂಸತ್ತಿಗೆ ಮೆರವಣಿಗೆ ಹೊರಟ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

Updated on: Jul 20, 2026 | 10:52 AM

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ನವದೆಹಲಿ ವ್ಯಾಪಕ ಉದ್ವಿಗ್ನತೆಗೆ ಸಾಕ್ಷಿಯಾಯಿತು. 'ಕಾಕ್ರೋಚ್ ಜನತಾ ಪಾರ್ಟಿ' (CJP) ಆಯೋಜಿಸಿದ್ದ "ಚಲೋ ಸಂಸದ್" ಮೆರವಣಿಗೆಯನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದಾಗ, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ಘರ್ಷಣೆ ಸಂಭವಿಸಿತು.

ನವದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ನವದೆಹಲಿ ವ್ಯಾಪಕ ಉದ್ವಿಗ್ನತೆಗೆ ಸಾಕ್ಷಿಯಾಯಿತು. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ “ಚಲೋ ಸಂಸದ್” ಮೆರವಣಿಗೆಯನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದಾಗ, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ಘರ್ಷಣೆ ಸಂಭವಿಸಿತು.

ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಬೆಂಬಲಿಗರು ಜಂತರ್ ಮಂತರ್‌ನಿಂದ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದರು. ಆದರೆ, ಭದ್ರತೆಯ ದೃಷ್ಟಿಯಿಂದ ದೆಹಲಿ ಪೊಲೀಸರು ಈ ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ನೀಡಿರಲಿಲ್ಲ. ಪ್ರತಿಭಟನಾ ಪ್ರದೇಶ ಹೊರತುಪಡಿಸಿ, ಐದಕ್ಕಿಂತ ಹೆಚ್ಚು ಜನರು ಒಟ್ಟುಗೂಡುವುದನ್ನು ಮತ್ತು ಮೆರವಣಿಗೆ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಈ ಆದೇಶವನ್ನು ಉಲ್ಲಂಘಿಸಿ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿ, ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡಲು ನಾಗರಿಕರು ಅನಧಿಕೃತ ಪ್ರತಿಭಟನೆಗಳಲ್ಲಿ ಭಾಗವಹಿಸಬಾರದು ಹಾಗೂ ಪೋಲಿಸರೊಂದಿಗೆ ಸಹಕರಿಸಬೇಕೆಂದು ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More