Video: ಲಂಡನ್​​ನಲ್ಲಿ ವಲಸೆ ವಿರೋಧಿ ಪ್ರತಿಭಟನಾ ಮೆರವಣಿಗೆ, ಪೊಲೀಸರ ಮೇಲೆ ಹಲ್ಲೆ

Updated on: Sep 14, 2025 | 9:06 AM

ಟಾಮಿ ರಾಬಿನ್ಸನ್ ಲಂಡನ್‌ನಲ್ಲಿ ಆಯೋಜಿಸಿದ್ದ ವಲಸೆ ವಿರೋಧಿ ಪ್ರತಿಭಟನಾ ಮೆರವಣಿಗೆಯಲ್ಲಿ 110,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇಪ್ಪತ್ತಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡರು. ನಾಲ್ವರ ಸ್ಥಿತಿ ಗಂಭೀರವಾಗಿದೆ. ಕೆಲವು ಅಧಿಕಾರಿಗಳ ಹಲ್ಲುಗಳು ಮುರಿದಿವೆ, ಇನ್ನೂ ಕೆಲವರಿಗೆ ಮೂಗು, ಮುಖ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಕನಿಷ್ಠ 25 ಜನರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ನಿರೀಕ್ಷೆಗೂ ಮೀರಿ ನಡೆದ ಘಟನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಟೀಕಿಸುವ ಘೋಷಣೆಗಳನ್ನು ಕೂಗುತ್ತಿದ್ದರು

ಟಾಮಿ ರಾಬಿನ್ಸನ್ ಲಂಡನ್‌ನಲ್ಲಿ ಆಯೋಜಿಸಿದ್ದ ವಲಸೆ ವಿರೋಧಿ ಪ್ರತಿಭಟನಾ ಮೆರವಣಿಗೆಯಲ್ಲಿ 110,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇಪ್ಪತ್ತಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡರು. ನಾಲ್ವರ ಸ್ಥಿತಿ ಗಂಭೀರವಾಗಿದೆ. ಕೆಲವು ಅಧಿಕಾರಿಗಳ ಹಲ್ಲುಗಳು ಮುರಿದಿವೆ, ಇನ್ನೂ ಕೆಲವರಿಗೆ ಮೂಗು, ಮುಖ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಕನಿಷ್ಠ 25 ಜನರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ನಿರೀಕ್ಷೆಗೂ ಮೀರಿ ನಡೆದ ಘಟನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಟೀಕಿಸುವ ಘೋಷಣೆಗಳನ್ನು ಕೂಗುತ್ತಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 14, 2025 09:04 AM