ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸಿನಿಮಾ ಸ್ಟೈಲ್​ಲ್ಲಿ ಕೆರೆಗೆ ಹಾರಿದ ಕಾರು!

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ(Bengaluru-Mysore highway)ಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎನ್ನುವಾಗಲೇ ಮತ್ತೊಂದು ಭೀಕರ ಅಪಘಾತ(Accident) ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಸ್ಕೋಡಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕೆರೆಗೆ ಸಿನಿಮಾ ರೀತಿಯಲ್ಲಿ ಹಾರಿ ಬಿದ್ದಿದೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸಿನಿಮಾ ಸ್ಟೈಲ್​ಲ್ಲಿ ಕೆರೆಗೆ ಹಾರಿದ ಕಾರು!
|

Updated on: Jun 08, 2024 | 5:09 PM

ರಾಮನಗರ, ಜೂ.08: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ(Bengaluru-Mysore highway)ಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎನ್ನುವಾಗಲೇ ಮತ್ತೊಂದು ಭೀಕರ ಅಪಘಾತ(Accident) ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಸ್ಕೋಡಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕೆರೆಗೆ ಸಿನಿಮಾ ರೀತಿಯಲ್ಲಿ ಹಾರಿ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೂ ಗಂಭೀರ ಗಾಯವಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಕಲಗೆರೆ ಗೇಟ್ ಬಳಿ ಹೆದ್ದಾರಿಯಿಂದ‌ ಸರ್ವಿಸ್ ರಸ್ತೆಗೆ ಬರುವ ವೇಳೆ ಓವರ್ ಸ್ಪೀಡ್​ನಿಂದಾಗಿ ಸರ್ವಿಸ್ ರಸ್ತೆಗೆ ತೆಗೆದುಕೊಳ್ಳುವ ವೇಳೆ ಈ ದುರ್ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us