Video: ಇವರೇನು ವಿದ್ಯಾರ್ಥಿಗಳಾ, ಗ್ಯಾಂಗ್​ಸ್ಟರ್​ಗಳಾ? ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ

Updated on: Dec 18, 2025 | 7:34 AM

ಇತ್ತೀಚಿನ ದಿನಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಥರ್ಥಗಳು ಗ್ಯಾಂಗ್​ಸ್ಟರ್​ಗಳ ರೀತಿ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಒಂದಿಷ್ಟು ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರೆ, ಇನ್ನು ಕೆಲವು ವಿದ್ಯಾರ್ಥಿಗಳು ತಮ್ಮ ವಿರೋಧಿಗಳ ಮೇಲೆ ಕಾರು ಹರಿಸಲು ಮುಂದಾಗಿರುವ ಭಯಾನಕ ಘಟನೆ ವರದಿಯಾಗಿದೆ. ಕಾರೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರ ಜೀವ ಉಳಿದಿದೆ. ಇಲ್ಲವಾದರೆ ಅವರು ಕಾರಿನಡಿಗಾಗುತ್ತಿದ್ದರು. ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.

ರೋಹ್ಟಕ್, ಡಿಸೆಂಬರ್ 18: ಇತ್ತೀಚಿನ ದಿನಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಥರ್ಥಗಳು ಗ್ಯಾಂಗ್​ಸ್ಟರ್​ಗಳ ರೀತಿ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಒಂದಿಷ್ಟು ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರೆ, ಇನ್ನು ಕೆಲವು ವಿದ್ಯಾರ್ಥಿಗಳು ತಮ್ಮ ವಿರೋಧಿಗಳ ಮೇಲೆ ಕಾರು ಹರಿಸಲು ಮುಂದಾಗಿರುವ ಭಯಾನಕ ಘಟನೆ ವರದಿಯಾಗಿದೆ. ಕಾರೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರ ಜೀವ ಉಳಿದಿದೆ. ಇಲ್ಲವಾದರೆ ಅವರು ಕಾರಿನಡಿಗಾಗುತ್ತಿದ್ದರು. ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More