AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಮಾಲತೇಶ ಜಗ್ಗೀನ್
| Edited By: |

Updated on: Jul 23, 2026 | 4:39 PM

Share

ದಳಪತಿ ವಿಜಯ್ ನಟನೆಯ ಕೊನೇ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಇರುವ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಲು ಚಿತ್ರಮಂದಿರಕ್ಕೆ ಬಂದಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ‘ಅಂಜನ್’ ಚಿತ್ರಮಂದಿರದಲ್ಲಿ ಸಂಭ್ರಮ ಜೋರಾಗಿದೆ. ವಿಜಯ್ ಅವರ ಕಟೌಟ್​​ಗಳು ರಾರಾಜಿಸುತ್ತಿವೆ.

ದಳಪತಿ ವಿಜಯ್ ನಟನೆಯ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಇಂದು (ಜುಲೈ 23) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಇರುವ ಅಭಿಮಾನಿಗಳು ಸಿನಿಮಾವನ್ನು ನೋಡಲು ಚಿತ್ರಮಂದಿರಕ್ಕೆ ಬಂದಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ‘ಅಂಜನ್’ ಚಿತ್ರಮಂದಿರದಲ್ಲಿ ಸಂಭ್ರಮ ಜೋರಾಗಿದೆ. ವಿಜಯ್ ಅವರ ಕಟೌಟ್​​ಗಳು ರಾರಾಜಿಸುತ್ತಿವೆ. ‘ಸಿನಿಮಾದಲ್ಲಿ ಒಳ್ಳೆಯ ಮೆಸೇಜ್ ಇದೆ. ಬೆಳಗ್ಗೆ 6 ಗಂಟೆಯ ಶೋ ನೋಡಿದ್ದೇನೆ. ಈಗ ಎರಡನೇ ಬಾರಿ ಸಿನಿಮಾ ನೋಡುತ್ತಿದ್ದೇವೆ. ಎಲ್ಲರೂ ಬಂದು ಸಿನಿಮಾ ನೋಡಿ. ಯಾರೂ ಮಿಸ್ ಮಾಡಿಕೊಳ್ಳಬೇಡಿ’ ಎಂದು ಚಿತ್ರಮಂದಿರದ ಮುಂದೆ ನೆರೆದಿದ್ದ ಅಭಿಮಾನಿಗಳು ಹೇಳಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ಜನ ನಾಯಗನ್’ ಬಿಡುಗಡೆ ಆಗಿರಬೇಕಿತ್ತು. ಆದರೆ ಸೆನ್ಸಾರ್ ಸಮಸ್ಯೆಯಿಂದ 7 ತಿಂಗಳ ಬಳಿಕ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More