ಪುನೀತ್ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳು ನಟ ‘ದಳಪತಿ’ ವಿಜಯ್
ಪುನೀತ್ ನಿಧನದ ನಂತರ ವಿಜಯ್ ಶ್ರದ್ಧಾಂಜಲಿ ಅರ್ಪಿಸಿ ಯಾವುದೇ ಟ್ವೀಟ್ ಮಾಡಿರಲಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕಿದ್ದರು. ಈಗ ಅವರು ಬಿಡುವು ಮಾಡಿಕೊಂಡು ಬೆಂಗಳೂರಿಗೆ ಬಂದು ‘ಪವರ್ ಸ್ಟಾರ್’ ಸಮಾಧಿಗೆ ನಮನ ಸಲ್ಲಿಕೆ ಮಾಡಿದ್ದಾರೆ.
ಪುನೀತ್ (Puneeth Rajkumar) ನಿಧನ ಹೊಂದಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಅವರಿಲ್ಲ ಎನ್ನುವ ನೋವನ್ನು ಮರೆಯೋಕೆ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಕೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಟ ಅಲ್ಲು ಅರ್ಜುನ್ ಅವರು ಆಗಮಿಸಿ ಪುನೀತ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದರು. ಇಂದು (ಫೆಬ್ರವರಿ 26) ತಮಿಳು ನಟ ‘ದಳಪತಿ’ ವಿಜಯ್ ಅವರು (Thalapathy Vijay) ಅಪ್ಪು ಸಮಾಧಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿಗೆ ಬರುತ್ತಿರುವ ಯಾವುದೇ ಸೂಚನೆಯನ್ನು ವಿಜಯ್ ನೀಡಿರಲಿಲ್ಲ. ಪುನೀತ್ ನಿಧನದ ನಂತರ ವಿಜಯ್ ಶ್ರದ್ಧಾಂಜಲಿ ಅರ್ಪಿಸಿ ಯಾವುದೇ ಟ್ವೀಟ್ ಮಾಡಿರಲಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕಿದ್ದರು. ಈಗ ಅವರು ಬಿಡುವು ಮಾಡಿಕೊಂಡು ಬೆಂಗಳೂರಿಗೆ ಬಂದು ‘ಪವರ್ ಸ್ಟಾರ್’ (Power Star) ಸಮಾಧಿಗೆ ನಮನ ಸಲ್ಲಿಕೆ ಮಾಡಿದ್ದಾರೆ. ಸದ್ಯ, ಈ ವಿಡಿಯೋ ವೈರಲ್ ಆಗುತ್ತಿದೆ.
ಇದನ್ನೂ ಓದಿ: Samantha: ಕೀಳು ಭಾಷೆಯಲ್ಲಿ ಸಮಂತಾಗೆ ಪ್ರಶ್ನಿಸಿದ ಅಭಿಮಾನಿ; ನಟಿಯ ಉತ್ತರ ಏನಿತ್ತು?
ಸಮಂತಾ ಸಿನಿ ಪಯಣಕ್ಕೆ 12 ವರ್ಷ; ವಿಶೇಷ ವ್ಯಕ್ತಿಗೆ ಧನ್ಯವಾದ ಹೇಳಿದ ನಟಿ
Published on: Feb 26, 2022 03:34 PM
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

