ದಳಪತಿ ವಿಜಯ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳು; ಧನ್ಯವಾದ ತಿಳಿಸಿದ ನಟ

Updated on: May 04, 2026 | 10:28 PM

ನಟ ದಳಪತಿ ವಿಜಯ್ ಅವರು ತಮಿಳುನಾಡು ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಅವರ ಟಿವಿಕೆ ಪಕ್ಷ ಬರೋಬ್ಬರಿ 107 ಸ್ಥಾನಗಳನ್ನು ಗೆದ್ದಿದೆ. ಈ ಗೆಲುವಿಗಾಗಿ ಎಲ್ಲರೂ ದಳಪತಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ವಿಜಯ್ ನಿವಾಸದ ಎದುರು ಜಮಾಯಿಸಿದ್ದಾರೆ.

ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡು ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಅವರ ಟಿವಿಕೆ (TVK) ಪಕ್ಷ ಬರೋಬ್ಬರಿ 107 ಸ್ಥಾನಗಳನ್ನು ಗೆದ್ದಿದೆ. ಈ ಗೆಲುವಿಗಾಗಿ ಎಲ್ಲರೂ ದಳಪತಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ವಿಜಯ್ ನಿವಾಸದ ಎದುರು ಜಮಾಯಿಸಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಪೋಷಕರ ಮನೆಯ ಹೊರಗೆ ಜಮಾಯಿಸಿದ್ದ ಜನಸಮೂಹವನ್ನು ನೋಡಿ ವಿಜಯ್ ಅವರು ಕೈಬೀಸಿ ಧನ್ಯವಾದ ತಿಳಿಸಿದರು. ತಮಿಳುನಾಡು ಚುನಾವಣೆಯಲ್ಲಿ ಅವರ ಪಕ್ಷವು ಗರಿಷ್ಠ ಮುನ್ನಡೆ ಸಾಧಿಸಿದೆ. ಮೊದಲ ಪ್ರಯತ್ನದಲ್ಲೇ ದಳಪತಿ ವಿಜಯ್ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ವಿಜಯ್ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More