ಚುನಾವಣೆ ಫಲಿತಾಂಶ ಬಂದಾಗ ಸಿದ್ದರಾಮಯ್ಯಗೆ ಯಾರು ಗೋ ಬ್ಯಾಕ್ ಯಾರು ಕಂ ಬ್ಯಾಕ್ ಅನ್ನೋದು ಗೊತ್ತಾಗಲಿದೆ: ಬಿಎಸ್ ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.
ಚಿತ್ರದುರ್ಗ: ನಗರದಲ್ಲಿಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ (Govind Karjol) ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa), ಕ್ಷೇತ್ರದೆಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ, ಕಾರಜೋಳ ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು. ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತದ ಬಗ್ಗೆ ಮಾತಾಡಿದ ಹಿರಿಯ ಬಿಜೆಪಿ ನಾಯಕ, ಅಸಮಾಧಾನಗೊಂಡಿರುವ ಎಲ್ಲರೊಂದಿಗೆ ಮಾತಾಡಿದ್ದೇವೆ, ಒಂದು ಪಕ್ಷವೆಂದ ಮೇಲೆ ಭಿನ್ನಮತ ಇದ್ದೇಇರುತ್ತೆ, ಎಲ್ಲ ಸರಿಹೋಗುತ್ತೆ ಅಂತ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣಗಳಲ್ಲಿ ಬಿಜೆಪಿ 40 ಪರ್ಸೆಂಟ್ ಕಮೀಶನ್ ಸರ್ಕಾರ ನಡೆಸಿದವರು ಅವರು ವೋಟು ಕೇಳಲು ಬಂದಾಗ ಗೋ ಬ್ಯಾಕ್ ಅಂತ ಹೇಳಿ ಜನರಿಗೆ ಹೇಳುತ್ತಿದ್ದಾರೆ ಎಂದಾಗ ಯಡಿಯೂರಪ್ಪ, ಚುನಾವಣೆ ಮುಗಿದು ಫಲಿತಾಂಶ ಬರಲಿ, ಯಾರು ಗೋ ಬ್ಯಾಕ್ ಯಾರು ಕಮ್ ಬ್ಯಾಕ್ ಅನ್ನೋದು ಗೊತ್ತಾಗಲಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಜೆಪಿ ಎರಡನೇ ಪಟ್ಟಿ: ವಿರೋಧಿಗಳಿಗೆ ಟಿಕೆಟ್ ತಪ್ಪಿಸುವಲ್ಲಿ ಬಿಎಸ್ ಯಡಿಯೂರಪ್ಪ ಮೇಲುಗೈ, ಸಂತೋಷ್ ಬಣಕ್ಕೆ ಅಲ್ಪ ಯಶಸ್ಸು