ಥಾರ್ ಚಕ್ರದ ಅಡಿಯಲ್ಲಿ ಸಿಲುಕಿದ ಕರು; ಸಮಯಪ್ರಜ್ಞೆ ಮೆರೆದು ಜೀವ ಉಳಿಸಿದ ಕಾರು ಮಾಲೀಕ!

Updated on: Mar 30, 2026 | 3:18 PM

ಮಹೀಂದ್ರಾ ಥಾರ್ ಕಾರಿನ ಚಕ್ರದಡಿ ಸಿಲುಕಿದ ಪುಟ್ಟ ಕರುವಿನ ರಕ್ಷಣೆ ಇತ್ತೀಚೆಗೆ ಎಲ್ಲರ ಗಮನ ಸೆಳೆದಿದೆ. ಕರು ಅಪಾಯದಲ್ಲಿರುವುದನ್ನು ಕಂಡ ತಾಯಿ ಹಸು ಕಾರನ್ನು ಕೊಂಬಿನಿಂದ ಎತ್ತಲು ಪ್ರಯತ್ನಿಸಿದ್ದು ಭಾವನಾತ್ಮಕ ದೃಶ್ಯವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಕಾರಿನ ಮಾಲೀಕರು ಮತ್ತು ಸ್ಥಳೀಯರು ಜ್ಯಾಕ್ ಬಳಸಿ ಕರುವನ್ನು ಸುರಕ್ಷಿತವಾಗಿ ಹೊರತೆಗೆದರು. ಈ ಮಾನವೀಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಕರು ಮತ್ತು ತಾಯಿಯ ಪುನರ್ಮಿಲನ ಎಲ್ಲರನ್ನೂ ಭಾವುಕರನ್ನಾಗಿಸಿತು.

ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಮಹೀಂದ್ರಾ ಥಾರ್ (Thar) ಎಸ್‌ಯುವಿಯ ಮುಂಭಾಗದ ಚಕ್ರದ ಅಡಿಯಲ್ಲಿ ಪುಟ್ಟ ಕರುವೊಂದು ಆಕಸ್ಮಿಕವಾಗಿ ಸಿಲುಕಿಕೊಂಡಿತ್ತು. ತನ್ನ ಕರು ಅಪಾಯದಲ್ಲಿರುವುದನ್ನು ಕಂಡ ತಾಯಿ ಹಸು ಗಾಬರಿಗೊಂಡು, ಕಾರಿನ ಮೇಲೆರಗಲು ಪ್ರಯತ್ನಿಸುತ್ತಿತ್ತು. ಕರುವಿನ ರಕ್ಷಣೆಗಾಗಿ ಹಸು ಕಾರನ್ನು ತನ್ನ ಕೊಂಬಿನಿಂದ ಎತ್ತಲು ಪ್ರಯತ್ನಿಸುತ್ತಿದ್ದ ದೃಶ್ಯ ವಿಡಿಯೋದಲ್ಲಿದೆ.ತಕ್ಷಣವೇ ಸ್ಥಳಕ್ಕೆ ಬಂದ ಕಾರಿನ ಮಾಲೀಕರು ಮತ್ತು ಸ್ಥಳೀಯರು ಹಸುವನ್ನು ಸಮಾಧಾನಪಡಿಸಲು ಯತ್ನಿಸಿದರು. ನಂತರ ಅತ್ಯಂತ ಎಚ್ಚರಿಕೆಯಿಂದ ಕಾರಿನ ಮುಂಭಾಗವನ್ನು ಜ್ಯಾಕ್ (Jack) ಬಳಸಿ ಮೇಲಕ್ಕೆತ್ತಿ, ಅಡಿಯಲ್ಲಿ ಸಿಲುಕಿದ್ದ ಕರುವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಚಕ್ರದ ಅಡಿಯಿಂದ ಹೊರಬಂದ ತಕ್ಷಣ ಕರು ಓಡಿ ಹೋಗಿ ತನ್ನ ತಾಯಿಯನ್ನು ಸೇರಿಕೊಂಡಿತು. ಈ ಅಪರೂಪದ ಪುನರ್ಮಿಲನವನ್ನು ಕಂಡು ನೆರೆದಿದ್ದ ಜನರು ಹರ್ಷ ವ್ಯಕ್ತಪಡಿಸಿದರು. ಸಕಾಲದಲ್ಲಿ ಸ್ಪಂದಿಸಿ ಮೂಕಪ್ರಾಣಿಯ ಜೀವ ಉಳಿಸಿದ ಕಾರಿನ ಮಾಲೀಕನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗರೆಯುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More