ದೀಪಕ್ ಅರಸ್​ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್

Updated on: Oct 18, 2024 | 4:54 PM

ಅಮೂಲ್ಯ ಅವರ ಸಹೋದರ ದೀಪಕ್ ಅರಸ್​ ನಿಧನರಾಗಿದ್ದು ಚಿತ್ರರಂಗದಲ್ಲಿ ಶೋಕ ಆವರಿಸಿದೆ. ನಿರ್ದೇಶಕ ತರುಣ್ ಸುಧೀರ್ ಅವರು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಅವರ ಜೊತೆ ಪತ್ನಿ ಸೋನಲಾ ಮಾಂತೆರೋ ಕೂಡ ಆಗಮಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್ ಸುಧೀರ್​ ಅವರು ದೀಪಕ್ ಜೊತೆಗಿನ ಒಡನಾಟ ನೆನಪಿಸಿಕೊಂಡರು.

‘ಗಜಕೇಸರಿ ಸಿನಿಮಾ ಮಾಡುವುದಕ್ಕಿಂತ ಮೊದಲಿನಿಂದಲೂ ನಾವು ಪರಿಚಿತರು. ಅವರು ನಿರ್ದೇಶನ ಮಾಡುವಾಗಲೆಲ್ಲ ನನ್ನ ಜೊತೆ ಸ್ಕ್ರಿಪ್ಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಅವರು ‘ಶುಗರ್​ ಫ್ಯಾಕ್ಟರಿ’ ಸಿನಿಮಾ ಸಿದ್ಧವಾದ ಮೇಲೆ ನನಗೆ ತೋರಿಸಿ, ಏನಾದರೂ ತಿದ್ದುಪಡಿ ಇದ್ದರೇ ತಿಳಿಸಿ ಅಂತ ಸಲಹೆ ಕೇಳಿದ್ದರು. ಅವರ ಇಡೀ ಕುಟುಂಬದವರು ನಮಗೆ ಆಪ್ತರಾಗಿದ್ದರು. ಅನಾರೋಗ್ಯದಲ್ಲೂ ಅವರು ನಮ್ಮ ಮದುವೆಗೆ ಬಂದು ಹರಸಿದ್ದರು. ಗುಣಮುಖರಾಗುತ್ತಾರೆ ಎಂಬ ನಂಬಿಕೆಯಲ್ಲಿ ನಾವು ಇದ್ದೆವು. ಆದರೆ ನಿನ್ನೆ ನಿಧನರಾಗಿದ್ದು ನಮಗೆ ಶಾಕಿಂಗ್’ ಎಂದು ತರುಣ್ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More