ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಕನ್ನಡ ಚಿತ್ರರಂಗದಲ್ಲಿ ಸುದೀಪ್ ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ವಿಡಿಯೋ ನೋಡಿ..
ಕನ್ನಡ ಚಿತ್ರರಂಗದಲ್ಲಿ ಸುದೀಪ್ (Kichcha Sudeep) ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ (Darshan Fans) ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ‘ಫ್ಯಾನ್ಸ್ ವಾರ್ ಎಲ್ಲ ಚಿತ್ರರಂಗದಲ್ಲೂ ಇದೆ. 10ರಲ್ಲಿ ಒಂದಾದರೂ ನೆಗೆಟಿವ್ ಕಮೆಂಟ್ ಇರತ್ತೆ. ವಿಕೃತ ಖುಷಿಪಡುವವರು ಯಾರ ಫ್ಯಾನ್ಸ್ ಕೂಡ ಅಲ್ಲ. ದರ್ಶನ್ ಅಭಿಮಾನಿಗಳನ್ನು ನಾನು ನೋಡಿದ್ದೇನೆ. ಅವರು ಆ ರೀತಿ ಇಲ್ಲ. ಅವರು ಸಿನಿಮಾಗೆ ಬೆಂಬಲ ಕೊಡುತ್ತಾರೆ. ಅವರು ಎಷ್ಟು ಚೆನ್ನಾಗಿ ಮಾತನಾಡುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ’ ಎಂದು ತರುಣ್ ಸುಧೀರ್ (Tharun Sudhir) ಅವರು ಹೇಳಿದ್ದಾರೆ. ನಟ ಸಾಧು ಕೋಕಿಲ ಕೂಡ ನೀಡಿದ ಪ್ರತಿಕ್ರಿಯೆ ಈ ವಿಡಿಯೋದಲ್ಲಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

