‘ಪ್ರೇಮದ ಊರಲಿ’ ಸಿನಿಮಾದ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್

Updated on: Oct 09, 2026 | 8:53 PM

ಮನೋಜ್ ಕುಮಾರ್ ನಿರ್ದೇಶನದ ‘ಪ್ರೇಮದ ಊರಲಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾದಲ್ಲಿ ತಪಸ್ವಿನಿ ಪೂಣಚ್ಚ, ರಮಿಕಾ ಶಿವು, ಶ್ರೀರಾಮ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಗೆಲುವಿನ ಬಗ್ಗೆ ತರುಣ್ ಸುಧೀರ್ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಮನೋಜ್ ಕುಮಾರ್ ನಿರ್ದೇಶನದ ‘ಪ್ರೇಮದ ಊರಲಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾದಲ್ಲಿ ತಪಸ್ವಿನಿ ಪೂಣಚ್ಚ, ರಮಿಕಾ ಶಿವು, ಶ್ರೀರಾಮ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಗೆಲುವಿನ ಬಗ್ಗೆ ತರುಣ್ ಸುಧೀರ್ ಅವರು ಮಾತನಾಡಿದ್ದಾರೆ. ‘ಕಳೆದ ಎರಡು ತಿಂಗಳಿಂದ ಕನ್ನಡ ಸಿನಿಮಾಗಳು ಚೆನ್ನಾಗಿ ಪ್ರದರ್ಶನ ಕಾಣುತ್ತಿವೆ. ಜನರು ಚಿತ್ರಮಂದಿರಕ್ಕೆ ಬರಲ್ಲ ಎಂಬ ಭ್ರಮೆಯನ್ನು ಈ ಸಿನಿಮಾಗಳು ಹೋಗಲಾಡಿಸಿವೆ. ಜನರು ಚಿತ್ರಮಂದಿರಕ್ಕೆ ಬರುವ ರೀತಿ ನಾವು ಸಿನಿಮಾ ಮಾಡದೇ ಜನರನ್ನು ದೂಷಿಸುವಂತಿಲ್ಲ. ಮುಂಬರುವ ಸಿನಿಮಾಗಳು ಕೂಡ ಚೆನ್ನಾಗಿವೆ. ನಮ್ಮ ಮಣ್ಣಿನ ಕಥೆಗಳು ಬಂಗಾರ ಇದ್ದಂತೆ. ಅಂಥ ಸಿನಿಮಾಗಳು ಯಾವಾಗಲೂ ಹಿಟ್ ಆಗುತ್ತವೆ. ಪ್ರೇಕ್ಷಕರ ಭಾವನೆಗಳನ್ನು ಸ್ಪರ್ಶಿಸಬೇಕು’ ಎಂದು ತರುಣ್ ಸುಧೀರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More