ರಾಜ್ಯದ ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ, ಯೆಲ್ಲೋ ಅಲರ್ಟ್ ಮುಂದುವರಿಕೆ

|

Updated on: Jul 05, 2024 | 11:15 AM

ಬ್ರಹ್ಮಾವರ ತಾಲ್ಲೂಕಿನಲ್ಲಿ ಭಯಂಕರವಾಗಿ ಮಳೆ ಸುರಿಯುತ್ತಿದೆ ಎಂದು ನಮ್ಮ ಉಡುಪಿ ಜಿಲ್ಲಾ ಪ್ರತಿನಿಧಿ ವರದಿಯೊಂದನ್ನು ಕಳಿಸಿದ್ದರು. ತಾಲ್ಲೂಕಿನಲ್ಲಿರುವ ಹಳ್ಳಕೊಳ್ಳಗಳೆಲ್ಲ ಉಕ್ಕಿ ಹರಿಯುತ್ತಿವೆ ಮತ್ತು ನೀರು ತಗ್ಗು ಪ್ರದೇಶಗಳಿಗೆ ಹರಿಯುತ್ತಿರುವುದರಿಂದ ಜನಜೀವನದ ಮೇಲೆ ಭಾರೀ ಪರಿಣಾಮ ಬೀರಿದೆ. ಮುಂಜಾಗ್ರತಾ ಕ್ರಮವಾಗಿ ತಗ್ಗುಪ್ರದೇಶಗಳಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸ ಶುರುವಾಗಿದೆ.

ಉಡುಪಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಕುಂದಾಪುರ, ಬೈಂದೂರು ಮತ್ತು ಬಹ್ಮಾವರ ತಾಲ್ಲೂಕುಗಳಲ್ಲಿ ಬಿಟ್ಟೂಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ ಮತ್ತು ರಕ್ಕಸಗಾತ್ರದ ಅಲೆಗಳು ತೀರವನ್ನು ಅಪ್ಪಳಿಸುತ್ತಿವೆ. ಈ ಭಾಗದ ಜನಕ್ಕೆ ಮೀನುಗಾರಿಕೆಯೇ ಜೀವನಾಧಾರ. ಆದರೆ ಸಮುದ್ರ ಶಾಂತಗೊಳ್ಳುವವರೆಗೆ ನೀರಿಗಿಳಿಯದಂತೆ ಉಡುಪಿ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಈ ಹಿಂದೆಯೇ ಜಾರಿಗೊಳಿಸಿದ್ದ ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಬ್ರಹ್ಮಾವರ, ಕುಂದಾಪುರ ಮತ್ತು ಬೈಂದೂರು ತಾಲ್ಲೂಕುಗಳಲ್ಲಿರುವ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಉಡುಪಿ ಜಿಲ್ಲೆಯಲ್ಲಿ ನಿಲ್ಲದ ಮಳೆ, ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ

Follow us on